ಮಂಗಳವಾರ, ನವೆಂಬರ್ 29, 2022
29 °C

ಪೌರಕಾರ್ಮಿಕರ ಆರೋಗ್ಯ ವಿಚಾರಿಸಿದ ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೌರಕಾರ್ಮಿಕರಿಗೆ
ಆತ್ಮವಿಶ್ವಾಸ ಮತ್ತು ಆತ್ಮಗೌರವ ತುಂಬಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಶುಕ್ರವಾರ ಪೌರಕಾರ್ಮಿಕರೊಂದಿಗೆ ಮುಖ್ಯಮಂತ್ರಿ ಉಪಾಹಾರ ಸೇವಿಸಿದ ನಂತರ ಮಾತನಾಡಿದರು.

ಪೌರಕಾರ್ಮಿಕರಿಗೆ ಸೇವಾ ಭದ್ರತೆ ಇರದಿದ್ದ ಕಾರಣ ಸಮಿತಿ ರಚಿಸಲಾಗಿತ್ತು. ಸಮಿತಿ ಶಿಫಾರಸಿನಂತೆ ಹಂತ ಹಂತವಾಗಿ ಸುಮಾರು 43 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಆದೇಶಿಸಲಾಗಿತ್ತು. ಅದರಂತೆ 11,137 ಪೌರಕಾರ್ಮಿಕರ ಹುದ್ದೆ ಕಾಯಂ ಮಾಡಲಾಗಿದೆ. 2ನೇ ಹಾಗೂ 3ನೇ ಕಂತಿನಲ್ಲಿ ಪೂರ್ತಿ ಮಾಡಲಾಗುವುದು ಎಂದು ಹೇಳಿದರು.

ಮಾನವೀಯತೆಯ ನೆಲೆಯಲ್ಲಿ ಗೌರವ ನೀಡಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಹೇಳಿದರು.

ಅದಕ್ಕೂ ಮೊದಲು ಪೌರಕಾರ್ಮಿಕರ ಕುಶಲೋಪರಿ ವಿಚಾರಿಸಿದ ಮುಖ್ಯಮಂತ್ರಿ ಅವರು, ‘ನಿಮ್ಮ ಆರೋಗ್ಯ, ನಿಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಕಾಳಜಿ ವಹಿಸಲಿದೆ’ ಎಂದು ಭರವಸೆ ತುಂಬಿದರು.

ವೇತನ ಸರಿಯಾಗಿ ಆಗುತ್ತಿದೆಯೇ? ಕೆಲಸದ ಸ್ಥಳದಲ್ಲಿ ಸೂಕ್ತ
ಸೌಲಭ್ಯಗಳು ದೊರೆಯುತ್ತಿವೆಯೇ? ಎಂಬ ಹಲವು ವಿಷಯಗಳ ಕುರಿತು ಪೌರಕಾರ್ಮಿಕರಾದ ಭಾರತಿ ಅವರಿಂದ ಮುಖ್ಯಮಂತ್ರಿ ಬೊಮ್ಮಾಯಿ ಮಾಹಿತಿ ಪಡೆದರು.

ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ, ಕೋಟ ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.