ಗ್ರಾಮಗಳಿಗೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಭೇಟಿ

7

ಗ್ರಾಮಗಳಿಗೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಭೇಟಿ

Published:
Updated:
Deccan Herald

ಚನ್ನಪಟ್ಟಣ: ತಾಲ್ಲೂಕಿನ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೃಷ್ಣಪ್ಪ ಅವರು ವಿವಿಧ ಇಲಾಖಾ ಅಧಿಕಾರಿಗಳ ಜೊತೆ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಕುಂದು ಕೊರತೆಗಳನ್ನು ಆಲಿಸಿದರು.

ಅಕ್ಕೂರು ಹೊಸಹಳ್ಳಿ, ಸೋಗಾಲ, ಅಕ್ಕೂರು, ಹಾರೋಕೊಪ್ಪ ಮೊದಲಾದ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವಂತೆ ಸೂಚಿಸಿದರೆ ಮತ್ತೆ ಕೆಲವು ಅರ್ಜಿಗಳನ್ನು ಸಂಬಂಧಿಸಿದ ಅಧಿಕಾರಿಗಳಿಗೆ ನೀಡಿ ಪರಿಹಾರ ನೀಡುವಂತೆ ತಿಳಿಸಿದರು.

ಕಂದಾಯ, ಗ್ರಾಮ ಪಂಚಾಯಿತಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತಿ, ಬೆಸ್ಕಾಂ, ಪಶುಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಅರ್ಜಿ ಸ್ವೀಕರಿಸಿದ ಅವರು, 15 ದಿನಗಳ ಒಳಗೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಹುತೇಕ ಗ್ರಾಮಗಳಲ್ಲಿ ಸಂಧ್ಯಾ ಸುರಕ್ಷ ಸೇರಿದಂತೆ ವಿವಿಧ ಪಿಂಚಣಿ ಅರ್ಜಿಗಳ ವಿಲೇವಾರಿ ಬಗ್ಗೆ ಉದಾಸೀನ ಮಾಡುತ್ತಿರುವ ಅಧಿಕಾರಿಗಳು 24 ಗಂಟೆಗಳಲ್ಲಿ ಬಾಕಿ ಉಳಿದಿರುವ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಸಿ.ಜಯಮುತ್ತು, ಎಂಜಿನಿಯರ್ ನಾರಾಯಣ್ ಗೌಡ, ಕೆಂಚೇಗೌಡ, ವಿವಿಧ ಇಲಾಖೆಯ ಅಧಿಕಾರಿಗಳು, ಜೆಡಿಎಸ್ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !