ಬಿಜೆಪಿಯತ್ತ ಚಂದ್ರಶೇಖರ್ ಒಲವು?

7

ಬಿಜೆಪಿಯತ್ತ ಚಂದ್ರಶೇಖರ್ ಒಲವು?

Published:
Updated:
Deccan Herald

ರಾಮನಗರ: ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿರುವ ಎಲ್. ಚಂದ್ರಶೇಖರ್ ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ವದಂತಿ ಹಬ್ಬಿದೆ.

ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್‌, ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ರುದ್ರೇಶ್ ಈಚೆಗೆ ಹೋಟೆಲ್ ಒಂದರಲ್ಲಿ ಚಂದ್ರಶೇಖರ್‌ರನ್ನು ಭೇಟಿ ಮಾಡಿ ಪಕ್ಷ ಸೇರುವಂತೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರೂ ಸಹ ಸ್ಪಂದಿಸಿದ್ದು, ಶೀಘ್ರ ನಿರ್ಧಾರ ತಿಳಿಸುವುದಾಗಿ ಹೇಳಿದರು ಎಂದು ತಿಳಿದುಬಂದಿದೆ.

ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪರ ಪುತ್ರರಾಗಿರುವ ಚಂದ್ರಶೇಖರ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್‌ಗಾಗಿ ಅವರು ಹಾಗೂ ಇಕ್ಬಾಲ್‌ ಹುಸೇನ್ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಪಕ್ಷವು ಇಕ್ಬಾಲ್‌ಗೆ ಅವಕಾಶ ನೀಡಿತ್ತು.

ಈಚಿನ ಕೆಲವು ದಿನಗಳಿಂದ ಚಂದ್ರಶೇಖರ್ ಬಿಜೆಪಿ ಸೇರ್ಪಡೆ ಕುರಿತು ಕ್ಷೇತ್ರದಲ್ಲಿ ಗುಸುಗುಸು ಮಾತಾಗಿತ್ತು. ಆದರೆ ಅವರು ಅದನ್ನು ಖಚಿತಪಡಿಸಿಲ್ಲ. ಈ ಕುರಿತು ಪ್ರತಿಕ್ರಿಯೆ ಪಡೆಯಲು ಅವರು ದೂರವಾಣಿ ಸಂಪರ್ಕಕ್ಕೆ ಲಭ್ಯವಾಗಲಿಲ್ಲ.

ರಾಮನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕುವಂತೆ ಸಿ.ಎಂ. ಲಿಂಗಪ್ಪ ಅವರು ಪಕ್ಷದ ನಾಯಕರಿಗೆ ಒತ್ತಡ ಹೇರಿದ್ದು, ಬಂಡಾಯ ಅಭ್ಯರ್ಥಿಯಾಗುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಇಂತಹ ಹೊತ್ತಿನಲ್ಲಿಯೇ ಅವರ ಪುತ್ರನ ಬಿಜೆಪಿ ಸೇರ್ಪಡೆ ಸುದ್ದಿ ಅಚ್ಚರಿ ಮೂಡಿಸಿದೆ.

ಮಗನ ಈ ನಿರ್ಧಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಲಿಂಗಪ್ಪ ‘ಈ ಬಗ್ಗೆ ನನಗೇನು ತಿಳಿದಿಲ್ಲ. ಅದು ಅವನ ಸ್ವಂತ ನಿರ್ಧಾರ’ ಎಂದಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !