ಉತ್ತರ ಕರ್ನಾಟಕ ಹಿನ್ನಡೆಗೆ ಕಾಂಗ್ರೆಸ್ ಕಾರಣ: ಈಶ್ವರಪ್ಪ

7

ಉತ್ತರ ಕರ್ನಾಟಕ ಹಿನ್ನಡೆಗೆ ಕಾಂಗ್ರೆಸ್ ಕಾರಣ: ಈಶ್ವರಪ್ಪ

Published:
Updated:

ಶಿವಮೊಗ್ಗ: ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿಯಲು ಕಾಂಗ್ರೆಸ್ಕಾ ರಣ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ. ಉತ್ತರ ಕರ್ನಾಟಕ ನಿರ್ಲಕ್ಷಿಸಿತ್ತು. ಈಗ ಅಭಿವೃದ್ಧಿ ವಿಷಯ ನೆಪವಾಗಿಟ್ಟುಕೊಂಡು ಎಂದು ರಾಜ್ಯ ಒಡೆಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಂತಹ ಪ್ರಯತ್ನಕ್ಕೆ ಕೈ ಹಾಕಿದರೇ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ಉಳಿಯುವುದಿಲ್ಲ ಎಂದು ಎಚ್ಚರಿಸಿದರು.

ನಂಜುಂಡಪ್ಪ ವರದಿ ಅನ್ವಯ ಬಿಡುಗಡೆಯಾದ ಹಣ ಸದ್ಬಳಕೆಯಾಗಿಲ್ಲ. ಹೈದರಾಬಾದ್– ಕರ್ನಾಟಕ ವಿಶೇಷ ಅನುದಾನವನ್ನೂ ಸಮರ್ಪಕವಾಗಿ ಬಳಸಿಲ್ಲ. ಉದ್ಯೋಗ ಭರ್ತಿಗೂ ಕ್ರಮ ಕೈಗೊಂಡಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ ಅವರು ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಗಮನ ನೀಡಿದ್ದರು. ನಂತರ ಬಂದ ಸರ್ಕಾರ ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು.

ಉತ್ತರ ಕರ್ನಾಟಕದವರು ನಮಗೆ ಮತ ನೀಡಿಲ್ಲ, ಈಗ ಅಭಿವೃದ್ಧಿ ಮಾಡಿ ಎಂದು ಕೇಳುತ್ತಿದ್ದೀರಾ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ. ಮುಖ್ಯಮಂತ್ರಿ ಬಾಯಲ್ಲಿ ಇಂತಹ ಮಾತು ಬರಬಾರದಿತ್ತು. ಅಧಿಕಾರ ಸಿಕ್ಕಿದರೆ ಬಿಜೆಪಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತದೆ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !