ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ವಾಸ್ತವ್ಯ ಮುಂದುವರಿಕೆ

7

ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ವಾಸ್ತವ್ಯ ಮುಂದುವರಿಕೆ

Published:
Updated:

ರಾಮನಗರ: ಕಾಂಗ್ರೆಸ್‌ ಶಾಸಕರ ರೆಸಾರ್ಟ್‌ ವಾಸ್ತವ್ಯ ಮುಂದುವರಿದಿದ್ದು, ಸೋಮವಾರವೂ ಶಾಸಕರು ಈಗಲ್‌ಟನ್‌ನಲ್ಲಿಯೇ ಇರಲಿದ್ದಾರೆ.

ಭಾನುವಾರ ಸಂಜೆ. 7.15ಕ್ಕೆ ರೆಸಾರ್ಟಿನಲ್ಲಿ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಯಿತು. ಸೋಮವಾರ ಬೆಳಿಗ್ಗೆ 11ಕ್ಕೆ ಮತ್ತೊಂದು ಸುತ್ತಿನ ಸಭೆ ನಡೆಯಲಿದ್ದು, ನಂತರದಲ್ಲಿ ಮುಂದಿನ ನಡೆ ಕುರಿತು ಚರ್ಚಿಸುವುದಾಗಿ ಕಾಂಗ್ರೆಸ್‌ ನಾಯಕರು ತಿಳಿಸಿದರು. 

ವೇಣುಗೋಪಾಲ್ ಸುಮಾರು ಮೂರು ಗಂಟೆ ಕಾಲ ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಒಬ್ಬೊಬ್ಬರಾಗಿ ಮಾತುಕತೆ ನಡೆಸಿದರು, ಶಾಸಕರ ಹೊಡೆದಾಟದ ವಿಷಯವೂ ಪ್ರಮುಖವಾಗಿ ಚರ್ಚೆಯಾಯಿತು.

ಬರಹ ಇಷ್ಟವಾಯಿತೆ?

 • 2

  Happy
 • 3

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !