ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಹಾರ; ಕಾಂಗ್ರೆಸ್ ಪ್ರತಿಭಟನೆ

Last Updated 12 ಸೆಪ್ಟೆಂಬರ್ 2019, 10:17 IST
ಅಕ್ಷರ ಗಾತ್ರ

ಕೊಲ್ಹಾರ: ಪ್ರವಾಹಕ್ಕೆ ತುತ್ತಾಗಿರುವ ರಾಜ್ಯದ ನೆರೆ ಸಂತ್ರಸ್ತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಪರಿಹಾರ ಒದಗಿಸಿಲ್ಲ ಎಂದು ಆರೋಪಿಸಿ ಕೊಲ್ಹಾರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು, ಮುಖಂಡರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಗಾಂಧಿ ವೃತ್ತದಲ್ಲಿ ಗುರುವಾರ ಪ್ರತಿಭಟನೆ ಮಾಡಿದರು.

ಬಳಿಕ ಉಪ ತಹಶೀಲ್ದಾರ್ ಎ.ಎಂ.ಗಿರಿನಿವಾಸ ಅವರಿಗೆ ಮನವಿ ಸಲ್ಲಿಸಿದರು.

‘ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಪ್ರವಾಹದಿಂದಾಗಿ ಸಾಕಷ್ಟು ಸಂತ್ರಸ್ತರು ಮನೆ ಕಳೆದುಕೊಂಡು ಬದುಕು ಬೀದಿಗೆ ಬಂದಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತ ಗಮನ ಹರಿಸದೇ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ-2 ವೀಕ್ಷಣೆಗಾಗಿ ರಾಜ್ಯಕ್ಕೆ ಆಗಮಿಸಿದಾಗ ಸೌಜನ್ಯಕ್ಕಾದರೂ ಉತ್ತರ ಕರ್ನಾಟಕ ಭಾಗದ ಪ್ರವಾಹ ಪರಿಸ್ಥಿತಿಯ ಸಮೀಕ್ಷೆ ಮಾಡಲಿಲ್ಲ. ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲ್ಲು ದೇಸಾಯಿ ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪಕಾಲಿ, ಹನೀಫ್ ಮಕಾನದಾರ, ಪಟ್ಟಣ ಪಂಚಾಯತಿ ಸದಸ್ಯರಾದ ಈರಣ್ಣ ಗಡ್ಡಿ, ಗೈಬುಸಾಬ್ ಕಂಕರಪೀರ, ಮುಖಂಡರಾದ ಸಲೀಮ್ ಕೊತ್ತಲ್, ರಾಜು ಇವಣಗಿ, ಯಮನಪ್ಪ ಮಾಕಾಳಿ, ಶಿಡ್ಲೆಪ್ಪ ತಳಗೇರಿ, ಎಂ.ಆರ್.ಕಲಾದಗಿ, ದಾದಾ ಗಿರಗಾಂವಿ, ದಶರತ್ ಈಟಿ, ಬಸೀರ ಕಂಕರಪೀರ, ಕಲ್ಲು ಸೊನ್ನದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT