ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಮೇಲೆ ಜಿಲ್ಲಾಡಳಿತದ ತೀವ್ರ ನಿಗಾ

ಅಗತ್ಯ ಕ್ರಮಕ್ಕೆ ಆಸ್ಪತ್ರೆಗಳು, ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Last Updated 13 ಮಾರ್ಚ್ 2020, 14:27 IST
ಅಕ್ಷರ ಗಾತ್ರ

ಶಿವಮೊಗ್ಗ: ವಿದೇಶದಿಂದ ಬರುವ ಪ್ರವಾಸಿಗರು ಸ್ವಯಂ ಪ್ರೇರಣೆಯಿಂದ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರಕೊರೊನಾವೈರಸ್ ನಿಯಂತ್ರಣ ಕುರಿತುಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರಿಗೆಆಯೋಜಿಸಲಾಗಿದ್ದ ಸಮಾಲೋಚನಾ ಸಭೆಯಲ್ಲಿ ಅವರುಮಾತನಾಡಿದರು.

ವೈರಸ್ ಹರಡದಂತೆಅಗತ್ಯ ಮುಂಜಾಗ್ರತಾ ಕ್ರಮ ಅನುಸರಿಸಲು ನಗರ ಮತ್ತು ಗ್ರಾಮೀಣ ಪ್ರದೇಶಗಳ ವೈದ್ಯರಿಗೆ ಸೂಚನೆ ನೀಡಲಾಗಿದೆ.ಖಾಸಗಿ ಆಸ್ಪತ್ರೆಗಳಲ್ಲಿ ಆರೋಗ್ಯ ತಪಾಸಣೆಗೆ ಬರುವಕೊರೊನಾಬಾಧಿತರಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾರ್ಡ್‌ ತೆರೆಯಬೇಕು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ವೈರಸ್‌ ತಗುಲಿದ ವ್ಯಕ್ತಿಯ ಪೂರ್ವಾಪರ, ಚಲನವಲನಗಮನಿಸಬೇಕು. ಕುಟುಂಬದ ಅವಲಂಬಿತರ, ನಿರಂತರ ಸಂಪರ್ಕದಲಿದ್ದವರನ್ನೂತಪಾಸಣೆಗೆ ಒಳಪಡಿಸಬೇಕು ಎಂದು ಸೂಚಿಸಿದರು.

ನಗರದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ 10 ಹಾಸಿಗೆಗಳನ್ನು ಕಾಯ್ದಿರಿಸಬೇಕು. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳಿಗೆ 15 ದಿನಗಳಲ್ಲಿ ವಿದೇಶ ಪ್ರವಾಸ ಮಾಡಿರುವ ಬಗ್ಗೆ ಪ್ರಶ್ನಿಸಬೇಕು.ಮಾಹಿತಿ ಕಲೆಹಾಕಬೇಕು. ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ವಿದೇಶಕ್ಕೆ ತೆರಳುವವರು, ವಿದೇಶದಿಂದ ದೇಶಕ್ಕೆ ಬರುವವರ ವಿವರ ನೀಡಬೇಕು.ಜಿಲ್ಲೆಯ ಹೋಂಸ್ಟೇಗಳು, ವಸತಿ ಗೃಹಗಳ ಮಾಲೀಕರಿಗೆ ಸೂಚನೆ ನೀಡಬೇಕು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಅಧಿಕಾರಿ-ಸಿಬ್ಬಂದಿ ವಿಶೇಷ ಗಮನಹರಿಸಬೇಕು ಎಂದರು.

ಈಗಾಗಲೇ ಜಿಲ್ಲೆಯ ಹೋಟೆಲ್‌ಗಳ ಮಾಲೀಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರಿಗೆ ಇಲಾಖೆ, ರೈಲ್ವೆ, ಶಿಕ್ಷಣ ಇಲಾಖೆ, ಖಾಸಗಿ ಆಸ್ಪತ್ರೆ, ಆಯುಷ್ ಇಲಾಖೆ, ಪಶುವೈದ್ಯಕೀಯ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗೆ ಪ್ರಾಥಮಿಕ ಮಾಹಿತಿ ನೀಡಲಾಗಿದೆ ಎಂದು ವಿವರ ನೀಡಿದರು.

ಕೋವಿಡ್‌–19ರ ಚಿಕಿತ್ಸೆಗೆ ಔಷಧ ಪರಿಕರಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಲಾಗಿದೆ. ತಪಾಸಣೆಗೆ ದಾಖಲಾಗುವ ರೋಗಿಗಳ ರಕ್ತದ ಮಾದರಿ ಪರೀಕ್ಷೆ, ಚಿಕಿತ್ಸೆಗೆ ವೈದ್ಯರು ಸದಾ ಸಿದ್ಧರಾಗಿರುವಂತೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಎಲ್ಲರೂ ನಿಯಮಿತವಾಗಿ ಕೈತೊಳೆಯುವ, ಕರವಸ್ತ್ರ ಬಳಕೆ ರೂಢಿಸಿಕೊಳ್ಳಬೇಕು. ಮಕ್ಕಳು ಮಾಸ್ಕ್ ಧರಿಸಿ ಶಾಲೆಗೆ ಬರುವುದುಕಡ್ಡಾಯವಲ್ಲ. ಒಂದು ವೇಳೆ ಮಕ್ಕಳಿಗೆ ಶೀತ, ಕೆಮ್ಮು, ಜ್ವರ ಇದ್ದಲ್ಲಿ ಮಕ್ಕಳ ಆರೋಗ್ಯ ಸುಧಾರಿಸುವವರೆಗೆ ಶಾಲೆಗೆ ಕಳಿಸದಂತೆ ಸುರಕ್ಷತಾ ಕ್ರಮ ಅನುಸರಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯ್ತಿ ಸಿಇಒ ಎಂ.ಎಲ್.ವೈಶಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಅನುರಾಧ, ಮೆಗ್ಗಾನ್ ಆಸ್ಪತ್ರೆ ನಿರ್ದೇಶಕ ಡಾ. ಲೇಪಾಕ್ಷಿ, ಡಾ.ಶಂಕರಪ್ಪ, ಡಾ.ಶಮಾ, ನಟರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT