ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸರಣಿ ತಂಡರಿಸಲು ಗೃಹ ನೆಲೆ ಅನಿವಾರ್ಯ:

ನಗರ ಪ್ರದಕ್ಷಿಣೆ ಮಾಡಿ ಸ್ಥಿತಿಗತಿ ಅವಲೋಕಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ
Last Updated 28 ಮಾರ್ಚ್ 2020, 12:38 IST
ಅಕ್ಷರ ಗಾತ್ರ

ಶಿವಮೊಗ್ಗ: ಕೊರೊನಾ ವೈರಸ್‌ ತಡೆಗೆ ಶ್ರಮಿಸುತ್ತಿರುವ ಜಿಲ್ಲಾಡಳಿತಕ್ಕೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು. ಅನಿವಾರ್ಯ ಸ್ಥಿತಿಹೊರತುಪಡಿಸಿ ಯಾರೂ ಮನೆಯಿಂದ ಹೊರಗೆ ಬರಬಾರದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ವೈರಸ್‌ ಸರಣಿ ತುಂಡರಿಸಲು ನೆರವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಕೋರಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕೊರೊನಾನಿರ್ವಹಣೆಸ್ಥಿತಿಗತಿ ಕುರಿತು ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ನಡೆದ ಸಮಾಲೋಚನಾ ಸಭೆಯಲ್ಲಿಅವರುಮಾತನಾಡಿದರು.

ಮೆಗ್ಗಾನ್ ವೈದ್ಯರ ಜತೆ ಖಾಸಗಿ ವೈದ್ಯರು ಸಹಕಾರ ನೀಡುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಶ್ರಮಿಸಲಾಗುತ್ತಿದೆ.ಅಗತ್ಯ ವಸ್ತುಗಳ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗಿದೆ. ತರಕಾರಿ, ದಿನಸಿ ಸಾಮಗ್ರಿಗಳ ಸಾಗಣೆ, ಮಾರಾಟ, ಖರೀದಿಗೆ ವ್ಯವಸ್ಥೆ ಮಾಡಲಾಗಿದೆ.ನಗರದ ಎಲ್ಲೆಡೆ ಕ್ರಿಮಿನಾಶಕ ಸಿಂಪಡಣೆ ಮಾಡಲಾಗುತ್ತಿದೆ.ಈ ಪ್ರಕ್ರಿಯೆ ನಿಗದಿತವಾಗಿ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದರು.

ರಸ್ತೆ ತಡೆ ಸಲ್ಲದು:

ಜಿಲ್ಲೆಯ ಯಾವುದೇ ಭಾಗದ ರಸ್ತೆ ಸಂಪರ್ಕಕ್ಕೆ ಅಡ್ಡಿಪಡಿಸುವುದು ಕಾನೂನು ಬಾಹಿರ.ಗ್ರಾಮಸ್ಥರುಸಂಯಮ ವಹಿಸಬೇಕು. ಇತರರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ರಸ್ತೆ ತಡೆಗೆಅವಕಾಶವಿಲ್ಲ ಎಂದರು.

ಕೃಷಿ ಉತ್ಪನ್ನ ಸಾಗಣೆ, ಮಾರಾಟಕ್ಕಿಲ್ಲ ಅಡ್ಡಿ:

ರೈತರು ಬೆಳೆದ ಉತ್ಪನ್ನಗಳನ್ನು ಮಾರುಕಟ್ಟೆಗೆ ತರಲು ನಿರ್ಬಂಧ ವಿಧಿಸಬಾರದು. ವಹಿವಾಟಿಗೆ ಧಕ್ಕೆ ಮಾಡಬಾರದು. ಹೆಚ್ಚಿನ ಬೆಲೆಗೆ ತರಕಾರಿ, ಅಗತ್ಯ ವಸ್ತುಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ತಳ್ಳುಗಾಡಿ, ಹಾಪ್‌ಕಾಮ್ಸ್‌ ವಾಹನಗಳಲ್ಲಿ ಬೀದಿಗಳಲ್ಲಿ ತರಕಾರಿ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಗ್ರಾಮಗಳಲ್ಲಿ ಅಕ್ರಮಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಪ್ರತಿ ತಾಲೂಕಿನಲ್ಲೂಕಂಟ್ರೋಲ್ ರೂಂ ತೆರಯಬೇಕು ಎಂದು ಸೂಚಿಸಿದರು.

ಹಕ್ಕಿಜ್ವರದ ಪರಿಣಾಮ ಜಿಲ್ಲೆಯಲ್ಲೂ ಕೋಳಿ ಹಾಗೂ ಮೊಟ್ಟೆ ಮಾರಾಟದ ಮೇಲೆ ನಿರ್ಬಂಧ ಹೇರುವ ಕುರಿತುತಜ್ಞರ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಂಸದಬಿ.ವೈ.ರಾಘವೇಂದ್ರ ಮಾತನಾಡಿ, ತಾಂತ್ರಿಕ ಕಾರಣಗಳಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.ತೊಂದರೆಸರಿಪಡಿಸುವಂತೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ. ರೈತರಿಗೆ, ಗ್ರಾಹಕರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಆರ್.ಪ್ರಸನ್ನಕುಮಾರ್, ಎಸ್.ರುದ್ರೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT