ಬುಧವಾರ, ಆಗಸ್ಟ್ 21, 2019
27 °C

ಲೈಂಗಿಕ ದೌರ್ಜನ್ಯ; 10 ವರ್ಷ ಶಿಕ್ಷೆ

Published:
Updated:

ವಿಜಯಪುರ: ಆರು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ಆದೇಶ ನೀಡಿದೆ.

ಸಿಂದಗಿ ಪಟ್ಟಣದ ಕಲ್ಯಾಣನಗರದ ನಿವಾಸಿ ಶಿಕ್ಷೆಗೆ ಗುರಿಯಾದವ. ಈತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ದಾಖಲಿಸಿಕೊಂಡ ಸಿಂದಗಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಜೋಶಿ ವೆಂಕಟೇಶ ಅವರು ಆರೋಪಿಗೆ 10 ವರ್ಷ ಜೈಲು ಶಿಕ್ಷೆ, ₹50 ಸಾವಿರ ದಂಡ ವಿಧಿಸಿದರು. ದಂಡ ಪಾವತಿಸಲು ತಪ್ಪಿದಲ್ಲಿ ಮತ್ತೆ ಒಂದು ವರ್ಷ ಜೈಲು ಶಿಕ್ಷೆಯನ್ನು ಅನುಭವಿಸಬೇಕು ಎಂದು ಆದೇಶ ಮಾಡಿದರು.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎನ್.ಎಸ್.ಪೂಜಾರಿ ವಾದ ಮಂಡಿಸಿದ್ದರು.

Post Comments (+)