ಭಾನುವಾರ, ಅಕ್ಟೋಬರ್ 24, 2021
20 °C

Covid-19 Karnataka Update: 6 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 589 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಹಾಗಾಗಿ, ಕೋವಿಡ್–19 ದೃಢಪಟ್ಟವರ ಒಟ್ಟು ಸಂಖ್ಯೆ 29,76,589ರಷ್ಟಾಗಿದೆ.

ರಾಜ್ಯದಲ್ಲಿ ಇಂದು 13 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದು, ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,807ಕ್ಕೆ ಏರಿದೆ

ಇದೇ ಅವಧಿಯಲ್ಲಿ 887 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 29,26,284 ರಷ್ಟಾಗಿದೆ. ರಾಜ್ಯದಲ್ಲಿ ಸದ್ಯ 12,469 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 0.46 ರಷ್ಟಾಗಿದ್ದು, ಸಾವಿನ ದರ ಶೇಕಡಾ 2.20ರಷ್ಟಿದೆ.

ಉಳಿದಂತೆ ಬೆಂಗಳೂರಲ್ಲಿ 221 ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಈವರೆಗೆ ನಗರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 16160ಕ್ಕೆ ಏರಿದ್ದು, 7627 ಸಕ್ರಿಯ ಪ್ರಕರಣಗಳಿವೆ.

86 ಪ್ರಕರಣ ದೃಢಪಡುವುದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ವಿಜಯಪುರ, ಯಾದಗಿರಿ, ಕಲಬುರಗಿ, ಗದಗ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲಿ ಇಂದು ಯಾವುದೇ ಕೋವಿಡ್ ಪ್ರಕರಣ ದೃಢಪಟ್ಟಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು