ಭಾನುವಾರ, ಫೆಬ್ರವರಿ 23, 2020
19 °C

ಅತ್ಯಾಚಾರ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಪೋಕ್ಸೊ ವಿಶೇಷ ನ್ಯಾಯಾಲಯ 10 ವರ್ಷ ಕಠಿಣಶಿಕ್ಷೆ, ₹30 ಸಾವಿರ ದಂಡ ವಿಧಿಸಿದೆ.

ತೀರ್ಥಹಳ್ಳಿ ತಾಲ್ಲೂಕಿನ ತೂದೂರು ಹೊಸಕೆರೆಯ ಭಾಸ್ಕರ (32) ಶಿಕ್ಷಗೆ ಒಳಗಾದ ಆರೋಪಿ. 

ಈ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಎರಡು ವರ್ಷಗಳ ಹಿಂದೆ ಮಾಳೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಧೀಶ ಕೆ.ಬಿ. ಶಿವಪ್ರಸಾದ್  ಆದೇಶ ನೀಡಿದ್ದಾರೆ. ಜಿಲ್ಲಾ ಕಾನೂನು ನೆರವು ಸಮಿತಿಯ ಶಿಫಾರಸ್ಸು ಮೇರೆಗೆ ಸರ್ಕಾರ ಸಂತ್ರಸ್ತೆಗೆ ₨ 3 ಲಕ್ಷ ಪರಿಹಾರ ನೀಡಿದೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಎಸ್.ಕೆ.ಮೂರ್ತಿರಾವ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು