ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೀಡುವ ನಾಗರಿಕ ಪುರಸ್ಕಾರ ‘ನಾಡಪ್ರಭು ಕೆಂಪೇಗೌಡ ಪ್ರಶಸ್ತಿ’ಗೆ ನಿರ್ದಿಷ್ಟ ಮಾನದಂಡ ರೂಪಿಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹೈಕೋರ್ಟ್ ವಜಾಗೊಳಿಸಿದೆ.

ಜೆ.ಪಿ.ನಗರದ 2ನೇ ಹಂತದ ನಿವಾಸಿ ಕೆ.ಅನಿಲ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ‘ಬೆಂಗಳೂರಿನಲ್ಲಿ ಮೂಲಸೌಕರ್ಯಗಳ ಕುರಿತಾದ ಸಾಕಷ್ಟು ಸಮಸ್ಯೆಗಳಿವೆ. ಮೊದಲು ಅವುಗಳ ಬಗ್ಗೆ ಗಮನಹರಿಸುವ ಅಗತ್ಯವಿದೆ. ಈ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಅಡಗಿಲ್ಲ’ ಎಂದು ಹೇಳಿ ಅರ್ಜಿ ವಜಾಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.