ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 118 ಜನರಿಗೆ ಕೊರೊನಾ ವೈರಸ್ ಸೋಂಕು ದೃಢ

Last Updated 24 ಆಗಸ್ಟ್ 2020, 16:51 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 118 ಜನರಿಗೆ ಕೋವಿಡ್‌ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 103, ವಿದೇಶಗಳಿಂದ ಬಂದಿರುವ ಮೂವರು ಹಾಗೂ ಹೊರ ರಾಜ್ಯಗಳಿಂದ ಬಂದಿರುವ 12 ಜನರಲ್ಲಿ ಕೋವಿಡ್‌ ಪತ್ತೆಯಾಗಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ. ರಾಮದಾಸ್‌ ತಿಳಿಸಿದ್ದಾರೆ.

ಕಾಸರಗೋಡು ನಗರಸಭೆ ವ್ಯಾಪ್ತಿಯ 14, ನೀಲೇಶ್ವರ ನಗರಸಭೆ ವ್ಯಾಪ್ತಿಯ 20, ಚೆರ್ವತ್ತೂರು ಪಂಚಾಯಿತಿ ವ್ಯಾಪ್ತಿಯ 11, ಪಿಲಿಕ್ಕೋಡ್‌ ಪಂಚಾಯಿತಿ ವ್ಯಾಪ್ತಿಯ ಎಂಟು, ಮಧೂರು ಮತ್ತು ಮಂಗಲ್ಪಾಡಿ ಪಂಚಾಯಿತಿಗಳ ವ್ಯಾಪ್ತಿಯ ತಲಾ ಐವರಲ್ಲಿ ಸೋಂಕು ಪತ್ತೆಯಾಗಿದೆ.

91 ಮಂದಿ ಸೋಂಕಿನಿಂದ ಗುಣಮುಖರಾಗಿರುವುದು ಸೋಮವಾರ ದೃಢಪಟ್ಟಿದ್ದು, ಕಾಸರಗೋಡು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,094ಕ್ಕೇರಿದ್ದು, ಈವರೆಗೆ 2,980 ಮಂದಿ ಗುಣಮುಖರಾಗಿದ್ದಾರೆ. ಸೋಂಕಿತರಲ್ಲಿ 31 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT