ಶುಕ್ರವಾರ, ಮೇ 7, 2021
19 °C
ನಿಧಾನವಾಗಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ

120 ಬಸ್‌ಗಳ ಕಾರ್ಯಾಚರಣೆ: ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದಿಂದಾಗಿ ಮೂರು ದಿನಗಳಿಂದ ಸ್ಥಗಿತವಾಗಿದ್ದ ಬಸ್‌ಗಳ ಸಂಚಾರ ನಿಧಾನವಾಗಿ ಆರಂಭವಾಗುತ್ತಿದೆ. ಸಾರಿಗೆ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದು, ಶನಿವಾರ 120 ಬಸ್‌ಗಳು ಸಂಚರಿಸಿವೆ.

ಹೈದರಾಬಾದ್, ಮದುರೈ, ಕೊಚ್ಚಿನ್‌, ಬೆಂಗಳೂರು ಸೇರಿದಂತೆ ವಿವಿಧೆಡೆ ರಾತ್ರಿ ಬಸ್‌ಗಳ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ ಬಹುತೇಕ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದು, ಬಸ್‌ಗಳ ಸಂಚಾರ ಸಹಜ ಸ್ಥಿತಿಗೆ ಬರುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್‌ ತಿಳಿಸಿದ್ದಾರೆ.

ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಶನಿವಾರವೂ ಖಾಸಗಿ ಬಸ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸಿದವು. ನಾಲ್ಕು ದಿನಗಳಿಂದ ಮಂಗಳೂರು–ಉಡುಪಿ ಮಧ್ಯೆ ಸಂಚಾರಕ್ಕೆ ಯಾವುದೇ ತೊಂದರೆ ಆಗಿಲ್ಲ. ಇದೀಗ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಕೆಲಸಕ್ಕೆ ಬರುತ್ತಿರುವುದರಿಂದ ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು