ಬಂಟ್ವಾಳ: ಇಲ್ಲಿನ ಭೂ ಅಭಿವೃದ್ಧಿ ಬ್ಯಾಂಕಿನ 13 ಮಂದಿ ನಿರ್ದೇಶಕರನ್ನು ಅಮಾನತುಗೊಳಿಸಿ ಮಂಗಳೂರು ಸಹಕಾರ ಸಂಘಗಳ ನಿಬಂಧಕರು ಆದೇಶ ಹೊರಡಿಸಿದ್ದಾರೆ.

ಈ ಬ್ಯಾಂಕಿನ ಆಡಳಿತ ಮಂಡಳಿಯು 6 ಮಂದಿ ಸಿಬ್ಬಂದಿಯನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿರುವುದನ್ನು ಇದೇ ಬ್ಯಾಂಕಿನ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಸುದರ್ಶನ್ ಜೈನ್ ಪ್ರಶ್ನಿಸಿ ಸಹಕಾರಿ ಇಲಾಖೆಗೆ ದೂರು ಸಲ್ಲಿಸಿದ್ದರು. ಇದರಿಂದ ದೂರುದಾರ ಸುದರ್ಶನ್ ಜೈನ್ ಸಹಿತ ಹಾಲಿ ಅಧ್ಯಕ್ಷ ಅರುಣ್ ರೋಶನ್ ಡಿಸೋಜ ಸೇರಿ ಎಲ್ಲಾ 13 ನಿರ್ದೇಶಕರನ್ನು ಮೂರು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ಎರಡು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 40 ವರ್ಷಗಳ ಬಳಿಕ ಪ್ರಥಮ ಬಾರಿಗೆ ಗೆದ್ದು ಬೀಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.