ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ.ಕ: 136 ಮಂದಿಗೆ ಕೋವಿಡ್ ದೃಢ

300 ಜನರು ಗುಣಮುಖ: ಮೃತ ಮೂವರಿಗೆ ಸೋಂಕು
Last Updated 25 ಅಕ್ಟೋಬರ್ 2020, 7:45 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಶನಿವಾರ ಕೋವಿಡ್‌–19 ಪ್ರಕರಣಗಳ ಸಂಖ್ಯೆ ಸ್ವಲ್ಪ ತಗ್ಗಿದೆ. 136 ಮಂದಿಗೆ ಕೋವಿಡ್‌ ದೃಢವಾಗಿದ್ದರೆ, 300 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಮೂವರಿಗೆ ಕೋವಿಡ್ ಇರುವುದು ಶನಿವಾರ ಖಚಿತವಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2,43,075 ಮಂದಿಯ ಗಂಟಲು ದ್ರವ ತಪಾಸಣೆ ಮಾಡಲಾಗಿದ್ದು, 2,13,674 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು 29,401 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ. ಇಲ್ಲಿಯವರೆಗೆ 26,125 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,616ಕ್ಕೆ ಇಳಿದಿದ್ದು, ಮೃತರ ಸಂಖ್ಯೆ 660ಕ್ಕೆ ಏರಿದೆ.

ಕಾಸರಗೋಡಿನಲ್ಲಿ 200 ಜನರಿಗೆ ಕೋವಿಡ್‌:

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 410 ಮಂದಿ ಗುಣಮುಖರಾಗಿದ್ದು, 200 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. 192 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ.

ಈವರೆಗೆ 17,695 ಮಂದಿಗೆ ಕೋವಿಡ್‌–19 ದೃಢವಾಗಿದ್ದು, 15,129 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 2,395 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಸೋಂಕಿಗೆ 171 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT