ಸೋಮವಾರ, ಮೇ 17, 2021
21 °C

ಕೋವಿಡ್ ನೆಗೆಟಿವ್ ಪ್ರಮಾಣಪತ್ರದ ಜೊತೆ ಬ್ರಿಟನ್‌ನಿಂದ 15 ಮಂದಿ ಮಂಗಳೂರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬ್ರಿಟನ್‌ನಿಂದ‌ 15 ಮಂದಿ ನಗರಕ್ಕೆ ಬಂದಿದ್ದು, ಎಲ್ಲರೂ‌ ಕೋವಿಡ್‌ ನೆಗೆಟಿವ್ ಪ್ರಮಾಣಪತ್ರ ಹೊಂದಿದ್ದಾರೆ. ಅದಾಗ್ಯೂ ಅವರನ್ನು ಮತ್ತೊಮ್ಮೆ‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು‌ ಡಿಎಚ್ಒ ಡಾ.ರಾಮಚಂದ್ರ ಬಾಯರಿ‌ ತಿಳಿಸಿದ್ದಾರೆ.

ಬ್ರಿಟಿಷ್‌ ಏರ್ ವೇಸ್, ಇಂಡಿಯನ್ ಏರಲೈನ್ಸ್ ವಿಮಾನಗಳ ಮೂಲಕ 15 ಜನರು ಬ್ರಿಟನ್ ನಿಂದ ಬೆಂಗಳೂರಿಗೆ ಬಂದು, ಅಲ್ಲಿಂದ ಮಂಗಳೂರಿಗೆ ಬಂದಿದ್ದಾರೆ.

ವಿಮಾನ ನಿಲ್ದಾಣದ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಎಲ್ಲ 15 ಜನರು ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿದ್ದಾರೆ. ಅದಾಗ್ಯೂ ಅವರ ಮೊಬೈಲ್ ಟ್ರ್ಯಾಕ್ ಮಾಡಿ, ಅವರನ್ನು ಪತ್ತೆ ಮಾಡಲಾಗುತ್ತಿದೆ‌. 
ಎಲ್ಲರನ್ನೂ ಮತ್ತೊಮ್ಮೆ ಆರ್ ಟಿ ಪಿಸಿಅರ್ ಪರೀಕ್ಷೆಗೆ ಒಳಪಡಿಸಲಾಗುವುದು. 14 ದಿನಗಳ ಕ್ವಾರಂಟೈನ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ‌ ತೆಗೆದುಕೊಳ್ಳಲಾಗುತ್ತಿದೆ.‌ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಾ.ಬಾಯರಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು