ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

190 ವಿದ್ಯಾರ್ಥಿಗಳಿಗೆ ಶೇ 100 ಅಂಕ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ದಾಖಲೆ
Last Updated 22 ಜುಲೈ 2021, 4:26 IST
ಅಕ್ಷರ ಗಾತ್ರ

ಮೂಡುಬಿದಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳು 600ಕ್ಕೆ 600 ಅಂಕ ಪಡೆಯುವ ಮೂಲಕ ಆಳ್ವಾಸ್ ಪದವಿಪೂರ್ವ ಕಾಲೇಜು ವಿಶಿಷ್ಟ ದಾಖಲೆ ಮಾಡಿದೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳ 19 ವಿಷಯವಾರು ಫಲಿತಾಂಶದಲ್ಲಿ ಒಟ್ಟು 3016 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. ಗಣಿತ ಹಾಗೂ ಇಂಗ್ಲಿಷ್‌ನಲ್ಲಿ ಕ್ರಮವಾಗಿ 542 ಮತ್ತು 514 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ. ಜೀವ ವಿಜ್ಞಾನ, ಭೌತ ವಿಜ್ಞಾನ, ಹಾಗೂ ರಸಾಯನ ವಿಜ್ಞಾನ, ಅಕೌಂಟೆನ್ಸಿಯಲ್ಲಿ ಕ್ರಮವಾಗಿ 403, 401, 308 ಹಾಗೂ 46 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ ಎಂದರು.

ಆಳ್ವಾಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ಪ್ರಮುಖರಾದ ಡಾ. ವೆಂಕಟೇಶ್ ನಾಯಕ್, ಚಂದ್ರಶೇಖರ್ ರಾಜೇ ಅರಸ್, ಝಾನ್ಸಿ ಪಿ. ಎನ್, ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ, ಸಂಯೋಜಕಿ ವಿದ್ಯಾ ಇದ್ದರು.

ಆಳ್ವಾಸ್ ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT