ಶುಕ್ರವಾರ, ಆಗಸ್ಟ್ 6, 2021
25 °C

ದಮಾಮ್‌ನಿಂದ ಬಂದ 191 ಮಂದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಸೌದಿ ಅರೇಬಿಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಆಯೋಜನೆ ಮಾಡಿದ್ದ ಪ್ರಥಮ ಬಾಡಿಗೆ ವಿಮಾನ ಗುರುವಾರ ಸಂಜೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

ತುರ್ತು ಚಿಕಿತ್ಸೆ ಅಗತ್ಯ ಇರುವವರು, ಗರ್ಭಿಣಿಯರು, ಮಕ್ಕಳು ಸೇರಿದಂತೆ 191 ಪ್ರಯಾಣಿಕರನ್ನು ಹೊತ್ತ ವಿಮಾನ ದಮಾಮ್‌ನಿಂದ ಹೊರಟಿತ್ತು. ಸಂಜೆ ಸುರಕ್ಷಿತವಾಗಿ ಮಂಗಳೂರು ತಲುಪಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರನ್ನು ಪ್ರಾಥಮಿಕ ಆರೋಗ್ಯ ತಪಾಸಣೆ ಒಳಪಡಿಸಲಾಗಿದೆ. ಅಲ್ಲದೇ ಆಯಾ ಜಿಲ್ಲೆಗಳಲ್ಲಿ ಹೋಟೆಲ್‌ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಕೆಸಿಎಫ್‌ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.