ಬೆಳ್ತಂಗಡಿ: ಇಲ್ಲಿನ ಸವಣಾಲು ಗ್ರಾಮದ ಹಲಸಿನಕಟ್ಟೆ ನಿವಾಸಿ ವೃದ್ಧ ಮಹಿಳೆಯ ಮೇಲೆ ಕುಡಿದ ಮತ್ತಿನಲ್ಲಿ ಮಗ ಮತ್ತು ಮೊಮ್ಮಗ ಅಮಾನುಷವಾಗಿ ಹಲ್ಲೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಬೆಳ್ತಂಗಡಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

90 ವರ್ಷದ ಅಪ್ಪಿ ಶೆಟ್ಟಿ ಹಲ್ಲೆಗೊಳಗಾದ ವೃದ್ಧೆ. ಅವರ ಮಗ ಶ್ರೀನಿವಾಸ ಶೆಟ್ಟಿ ಮತ್ತು ಮೊಮ್ಮಗ ಪ್ರದೀಪ ಶೆಟ್ಟಿ, ಕಂಠಪೂರ್ತಿ ಕುಡಿದು ಹಲ್ಲೆ ಮಾಡಿದ್ದರು. ಕಳೆದ ಮೂರು ವರ್ಷಗಳಿಂದ ಅಪ್ಪಿ ಶೆಟ್ಟಿ ಅನಾರೋಗ್ಯದಿಂದ ಮನೆಯಲ್ಲೇ ಇದ್ದಾರೆ.

ಮೂರು ದಿನಗಳ ಹಿಂದೆ ಮನೆಯಲ್ಲೇ ಮಲಗಿದ್ದ ಅಜ್ಜಿಯನ್ನು ಮಗ ಹಾಗೂ ಮೊಮ್ಮಗ ಎಳೆದೊಯ್ದು ಹಲ್ಲೆ ನಡೆಸಿದ್ದರು. ಎತ್ತಿ ನೆಲಕ್ಕೆ ಹಾಕುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ನೋಡಿದ ಅನೇಕ ಮಂದಿ ಇವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ವಿಷಯ ಗಮನಕ್ಕೆ ಬರುತ್ತಿದ್ದಂತೆ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್‌ಸ್ಪೆಕ್ಟರ್ ನಂದಕುಮಾರ್ ಹಾಗೂ ಪೊಲೀಸರು, ಸ್ಥಳಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.