ಭಾನುವಾರ, ಜುಲೈ 3, 2022
25 °C
ಮೂವರ ಸಾವು: 10ಕ್ಕೇರಿದ ಮೃತರ ಸಂಖ್ಯೆ

ಕಪ್ಪು ಶಿಲೀಂಧ್ರ: 2 ಹೊಸ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಬುಧವಾರ ಮತ್ತೆ 2 ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಮೃತಪಟ್ಟಿದ್ದಾರೆ. ಎರಡೂ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬುಧವಾರ ಮೃತಪಟ್ಟ ಮೂವರಲ್ಲಿ ಇಬ್ಬರು ಚಿಕ್ಕಮಗಳೂರು ಮತ್ತು ಒಬ್ಬರು ಶಿವಮೊಗ್ಗ ಜಿಲ್ಲೆಯವರಾಗಿದ್ದು, ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಿಲ್ಲೆಯಲ್ಲಿ ಸದ್ಯ 53 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 11 ದಕ್ಷಿಣ ಕನ್ನಡ ಮತ್ತು 42 ಪ್ರಕರಣಗಳು ಬೇರೆ ಜಿಲ್ಲೆಗೆ ಸಂಬಂಧಿಸಿದ್ದಾಗಿವೆ.

ಜಿಲ್ಲೆಯಲ್ಲಿ ಈಗಾಗಲೆ ಹೊರ ಜಿಲ್ಲೆಯ ನಾಲ್ವರು ಕಪ್ಪು ಶಿಲೀಂಧ್ರ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಲಕ್ಷಣ ಹೊಂದಿದ್ದ ಜಿಲ್ಲೆಯ ಇಬ್ಬರು ಮತ್ತು ಹೊರ ಜಿಲ್ಲೆಯ 8 ಮಂದಿ ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್‌: ಕರಾವಳಿಯಲ್ಲಿ 6 ಸಾವು

ಮೃತಪಟ್ಟಿರುವ ದಕ್ಷಿಣ ಕನ್ನಡ ಹಾಗೂ ಉಡುಪಿಯ ತಲಾ ಮೂವರಿಗೆ ಕೋವಿಡ್ ಇರುವುದು ದೃಢವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 594 ಮಂದಿಗೆ ಕೋವಿಡ್‌ ದೃಢಪಟ್ಟಿದ್ದು, 637 ಮಂದಿ ಗುಣಮುಖರಾಗಿದ್ದಾರೆ.

ಉಡುಪಿ: ಜಿಲ್ಲೆಯಲ್ಲಿ 409 ಮಂದಿಗೆ ಕೋವಿಡ್–19 ದೃಢವಾಗಿದ್ದು, 423 ಗುಣಮುಖರಾಗಿದ್ದಾರೆ. ಸದ್ಯ 3,766 ಸಕ್ರಿಯ ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.