ಮಂಗಳೂರು: 2.5 ಕೆ.ಜಿ. ಗಾಂಜಾ ವಶ
ಮಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಕಠಿಣ ಕ್ರಮಕ್ಕೆ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಮುಂದಾಗಿದ್ದು, ಬುಧವಾರ ಮೂವರನ್ನು ಬಂಧಿಸಿ 2.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸಂತೋಷ್, ದಿಲೀಪ್ ನಾಗರಾವ್, ಇಮ್ರಾನ್ ಜುಬೇರ್ ಎಂಬುವವರನ್ನು ನಾರ್ಕೊಟಿಕ್ ಮತ್ತು ವಾಣಿಜ್ಯ ಅಪರಾಧ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಈ ಗಾಂಜಾವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸಲು ತಂದಿದ್ದರು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.