ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುತ್ತೂರು ಕ್ಷೇತ್ರಕ್ಕೆ 250 ಮನೆ ಮಂಜೂರು: ಶಾಸಕ ಅಶೋಕ್‌ಕುಮಾರ್ ರೈ

Published 4 ಜುಲೈ 2024, 13:26 IST
Last Updated 4 ಜುಲೈ 2024, 13:26 IST
ಅಕ್ಷರ ಗಾತ್ರ

ಪುತ್ತೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆಯಲ್ಲಿ 190, ಅಂಬೇಡ್ಕರ್ ನಿಗಮದಿಂದ 60 ಸೇರಿ 250 ಮನೆ ಮಂಜೂರಾಗಿದೆ ಎಂದು ಶಾಸಕ ಅಶೋಕ್‌ಕುಮಾರ್ ರೈ ತಿಳಿಸಿದ್ದಾರೆ.

ಮನೆ ನಿರ್ಮಿಸಲು ಅಶಕ್ತರಾದ ಸಾವಿರಾರು ಮಂದಿ ಬಡವರು ಮನೆಗಾಗಿ ಗ್ರಾಮ ಪಂಚಾಯಿತಿಗಳಿಗೆ ಸಲ್ಲಿಸಿದ ಅರ್ಜಿಗಳು ವಿಲೇವಾರಿ ಆಗಿರಲಿಲ್ಲ. ಮನೆ ಇಲ್ಲದವರಿಗೆ ಮನೆ ಕೊಡಬೇಕು ಎಂದು ಸರ್ಕಾರದ ಗಮನ ಸೆಳೆದು, ವಸತಿ ಸಚಿವ ಜಮೀರ್ ಅಹ್ಮದ್ ಅವರಿಗೂ ಮನವಿ ಮಾಡಿದ್ದೆ. ಇದೀಗ ಮೊದಲ ಹಂತದಲ್ಲಿ 250 ಮನೆ ಮಂಜೂರಾಗಿದೆ. ಮುಂದಿನ ಹಂತಗಳಲ್ಲಿ ಇನ್ನಷ್ಟು ಮನೆಗಳು ಮಂಜೂರಾಗಲಿವೆ ಎಂದು ಅವರು ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಮನೆ ಮಂಜೂರು ಆಗಿಲ್ಲ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸಾವಿರಾರು ಅರ್ಜಿ ಬಾಕಿ ಇದೆ. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿ ಸಲ್ಲಿಸಿರುವ, ಮನೆ ಇಲ್ಲದ ಕಡುಬಡವರಿಗೆ ಪ್ರಸ್ತುತ ಮಂಜೂರಾಗಿರುವ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT