27 ಮಂದಿಗೆ ಕೋವಿಡ್; 46 ಗುಣಮುಖ
ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ ಕೇವಲ 27 ಮಂದಿಗೆ ಕೋವಿಡ್–19 ದೃಢವಾಗಿದ್ದು, 46 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟ ಒಬ್ಬರಿಗೆ ಕೋವಿಡ್–19 ಇರುವುದು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 3.61 ಲಕ್ಷ ಜನರ ಗಂಟಲು ದ್ರವ ಪರೀಕ್ಷಿಸಲಾಗಿದ್ದು, 3.30 ಲಕ್ಷ ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು 31,923 ಜನರಿಗೆ ಕೋವಿಡ್ ದೃಢವಾಗಿದ್ದು, 30,622 ಮಂದಿ ಗುಣಮುಖರಾಗಿದ್ದಾರೆ. ಸದ್ಯ 588 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 713 ಕ್ಕೆ ಏರಿದೆ.
ಜಿಲ್ಲೆಯಲ್ಲಿ ಮಾಸ್ಕ್ ನಿಯಮ ಉಲ್ಲಂಘನೆಯ 14,876 ಪ್ರಕರಣಗಳನ್ನು ಪತ್ತೆ ಮಾಡಿದ್ದು, ₹16 ಲಕ್ಷ ದಂಡ ವಸೂಲಿ ಮಾಡಲಾಗಿದೆ.
ಕಾಸರಗೋಡಿನಲ್ಲಿ 86 ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 86 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 82 ಮಂದಿ ಗುಣಮುಖರಾಗಿದ್ದು, ಮೃತಪಟ್ಟ ಒಬ್ಬರಿಗೆ ಕೋವಿಡ್ ಇರುವುದು ಪತ್ತೆಯಾಗಿದೆ. ಸದ್ಯ 1,087 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.