ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡದಲ್ಲಿ ಕೋವಿಡ್‌ನಿಂದ ಮೂವರು ಸಾವು

ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 22ಕ್ಕೆ ಏರಿಕೆ
Last Updated 4 ಜುಲೈ 2020, 7:34 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕಿನಿಂದ ಶುಕ್ರವಾರ ರಾತ್ರಿ ಒಬ್ಬರು ಮತ್ತು ಶನಿವಾರ ಬೆಳಿಗ್ಗೆ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 22ಕ್ಕೇರಿದೆ.

ಉಸಿರಾಟದ ತೀವ್ರ ತೊಂದರೆ ಎದುರಿಸುತ್ತಿದ್ದ ಸುಳ್ಯ ತಾಲ್ಲೂಕಿನ ನಿವೃತ್ತ ಶಿಕ್ಷಕಿಯೊಬ್ಬರು ಶುಕ್ರವಾರ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತದೇಹದ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷಿಸಿದ್ದು, ಕೋವಿಡ್‌ ಸೋಂಕು ದೃಢಪಟ್ಟಿದೆ.

ಉಸಿರಾಟದ ತೊಂದರೆ ಎದುರಿಸುತ್ತಿದ್ದ ಮಂಗಳೂರಿನ ಕೂಳೂರಿನ 65 ವರ್ಷದ ಮಹಿಳೆ ಮತ್ತು ಕೋಡಿಕ್ಕಲ್‌ನ 67 ವರ್ಷದ ಪುರುಷ ಶನಿವಾರ ಬೆಳಿಗ್ಗೆ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ಇಬ್ಬರಿಗೂ ಕೋವಿಡ್‌–19 ಸೋಂಕು ತಗುಲಿರುವುದು ಖಚಿತಪಟ್ಟಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

‘ಮೂವರೂ ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಮೃತಪಟ್ಟಿದ್ದರು. ಮೃತದೇಹಗಳ ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದೆ. ಮೃತರ ಅಂತ್ಯಸಂಸ್ಕಾರ ಕೋವಿಡ್‌–19 ಮಾರ್ಗಸೂಚಿಗಳ ‍ಪ್ರಕಾರ ಕ್ರಮ ಜರುಗಿಸಲಾಗುವುದು’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT