4
ಬಂಟ್ವಾಳ: ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆ

3 ಮಲೇರಿಯಾ, 14 ಡೆಂಗ್ಯೂ ಪತ್ತೆ

Published:
Updated:
ಬಂಟ್ವಳದಲ್ಲಿ ಗುರುವಾರ ನಡೆದ ಕೆಡಿಪಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯರು ಇದ್ದರು. (ಬಂಟ್ವಾಳ ಚಿತ್ರ)

ಬಂಟ್ವಾಳ: ತಾಲ್ಲೂಕಿನಲ್ಲಿ ಆರೋಗ್ಯ ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದರೂ 3 ಮಲೇರಿಯಾ ಮತ್ತು 14  ಡೆಂಗಿ ಜ್ವರ ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು 78 ಮಂದಿಗೆ ಶಂಕಿತ ಡೆಂಗಿ ಬಾಧಿಸಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು ಹೇಳಿದರು.

 ಬಿ.ಸಿ.ರೋಡಿನಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಅವರು ಈ ಬಗ್ಗೆ ಮಾಹಿತಿ ನೀಡಿದರು.

ಬಾಧಿತ ಪ್ರದೇಶಗಳನ್ನು ಗುರುತಿಸಿ ಫಾಗಿಂಗ್ ನಡೆಸಲಾಗಿದೆ ಎಂದರು.

ಕ್ಷೇತ್ರಶಿಕ್ಷಣಾಧಿಕಾರಿ ಶಿವಪ್ರಕಾಶ್ ಮಾತನಾಡಿ, ತಾಲ್ಲೂಕಿನಲ್ಲಿ ವಿದ್ಯಾರ್ಥಗಳ ಸಂಖ್ಯೆ ಇಲ್ಲದ ಪರಿಣಾಮ ಜಕ್ರಿಬೆಟ್ಟು ಮತ್ತು ತೋರಣಕಟ್ಟೆ ಸಕರ್ಾರಿ ಪ್ರಾಥಮಿಕ ಶಾಲೆ ಮುಚ್ಚಲಾಗಿದ್ದು, ಈ ವರ್ಷ ಆನ್‌ಲೈನ್ ದಾಖಲಾತಿಯಲ್ಲಿ ಪ್ರಗತಿ ಕಂಡು ಬಂದಿದೆ ಎಂದರು.

ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮಿ ಸಿ.ಬಂಗೇರ, ಕಾರ್ಯ ನಿರ್ವಹಣಾಧಿಕಾರಿ ರಾಜಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !