ಮಂಗಳವಾರ, ಮೇ 18, 2021
30 °C
ಧಾರ್ಮಿಕ ಆಚರಣೆಗೆ ಅನುಮತಿ ರದ್ದು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 309 ಜನರಿಗೆ ಕೋವಿಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್–19 ಪ್ರಕರಣಗಳು ಏರುಗತಿಯಲ್ಲಿದ್ದು, ಶನಿವಾರ 309 ಜನರಿಗೆ ಕೋವಿಡ್–19 ದೃಢವಾಗಿದೆ. ಈ ವರ್ಷ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ.

ಇದುವರೆಗೆ ಒಟ್ಟು 6.82 ಲಕ್ಷ ಜನರ ಗಂಟಲು ದ್ರವ ತಪಾಸಣೆ ನಡೆಸಿದ್ದು, 6.42 ಲಕ್ಷ ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 37,871 ಜನರಿಗೆ ಕೋವಿಡ್–19 ದೃಢವಾಗಿದ್ದು, 35,504 ಜನರು ಗುಣಮುಖರಾಗಿದ್ದಾರೆ. ಸದ್ಯ 1,623 ಸಕ್ರಿಯ ಪ್ರಕರಣಗಳಿವೆ.

ಮತ್ತೊಂದು ಸಾವು: ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರಿಗೆ ಕೋವಿಡ್–19 ಇರುವುದು ಶನಿವಾರ ದೃಢವಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 744 ಮಂದಿ ಮೃತಪಟ್ಟಿದ್ದಾರೆ.

ದಂಡ: ಮಾಸ್ಕ್‌ ನಿಯಮ ಉಲ್ಲಂಘನೆಯ 46,098 ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ₹47.86 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಧಾರ್ಮಿಕ ಕಾರ್ಯಕ್ರಮ ಅನುಮತಿ ರದ್ದು: ಮಹಾನಗರ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆಯ ಅಧಿಕಾರಿ ಗಳು ಈಗಾಗಲೇ ನೀಡಿರುವ ಧಾರ್ಮಿಕ ಕಾರ್ಯಕ್ರಮಗಳ ಅನುಮತಿಯನ್ನು ತಕ್ಷಣದಿಂದ ರದ್ದು ಮಾಡಿದ್ದಾರೆ.

ಸಾರ್ವಜನಿಕರು ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರ ಕಾಪಾಡುವುದು, ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಿದೆ. ಆನ್‌ಲೈನ್ ಫುಡ್ ಡೆಲಿವರಿ ಸಂಪರ್ಕಿಸುವ ಹೋಟೆಲ್, ಬಾರ್ ಮತ್ತು ರೆಸ್ಟೊರೆಂಟ್ ಸಿಬ್ಬಂದಿ ಹಾಗೂ ಸೂಪರ್ ಮಾರ್ಕೆಟ್, ಮಾಲ್, ಮದುವೆ ಹಾಲ್ ಸಿಬ್ಬಂದಿ ಮತ್ತು ಬಸ್ ಚಾಲಕರು, ನಿರ್ವಾಹಕರು, ರಿಕ್ಷಾ ಚಾಲಕರು, ಇತರ ಜನಸಂದಣಿ ಪ್ರದೇಶದಲ್ಲಿ ಸೇರುವವರು ಪ್ರತಿ 15 ದಿನಗಳಿಗೊಮ್ಮೆ ಕೋವಿಡ್ ಪರೀಕ್ಷೆಯನ್ನು ಮಾಡಬೇಕು ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್‌ ತಿಳಿಸಿದ್ದಾರೆ.

ಈ ನಿಯಮಗಳನ್ನು ಉಲ್ಲಂಸಿದರೆ ಸರ್ಕಾರದ ಆದೇಶದಂತೆ ವಿಪತ್ತು ನಿರ್ವಹಣೆ ಕಾಯ್ದೆಯ ಪ್ರಕಾರ ದಂಡ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾಸರಗೋಡು: 333 ಪ್ರಕರಣ
ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 333 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 175 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3,619 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 36,750 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಒಟ್ಟು 32,806 ಮಂದಿ ಗುಣಮುಖರಾಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು