316 ಮಂದಿಗೆ ಕೋವಿಡ್: 322 ಗುಣಮುಖ
ಮಂಗಳೂರು: ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 316 ಮಂದಿಗೆ ಕೋವಿಡ್–19 ದೃಢವಾಗಿದ್ದು, 322 ಮಂದಿ ಗುಣಮುಖರಾಗಿದ್ದಾರೆ. ಐವರು ಮೃತಪಟ್ಟಿದ್ದು, ಅವರಿಗೆ ಕೋವಿಡ್ ಇರುವುದು ಖಚಿತವಾಗಿದೆ.
ಪ್ರಾಥಮಿಕ ಸಂಪರ್ಕದಿಂದ 108 ಜನರಿಗೆ ಸೋಂಕು ತಗಲಿದ್ದು, 166 ಮಂದಿಗೆ ಶೀತಜ್ವರ (ಐಎಲ್‌ಐ) ಲಕ್ಷಣದಿಂದ ಕೋವಿಡ್ ಪತ್ತೆಯಾಗಿದೆ. 11 ಮಂದಿಯಲ್ಲಿ ತೀವ್ರ ಉಸಿರಾಟದ ತೊಂದರೆ (ಎಸ್‌ಎಆರ್‌ಐ), 31 ಮಂದಿಯ ಸೋಂಕಿನ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ.
ಮಂಗಳೂರು ತಾಲ್ಲೂಕಿನಲ್ಲಿ 148, ಬಂಟ್ವಾಳದ 44, ಪುತ್ತೂರಿನ 42, ಸುಳ್ಯ ತಾಲ್ಲೂಕಿನ 20, ಬೆಳ್ತಂಗಡಿಯ 37 ಹಾಗೂ ಬೇರೆ ಜಿಲ್ಲೆಗಳ 25 ಜನರಲ್ಲಿ ಕೋವಿಡ್–19 ದೃಢವಾಗಿದೆ. 117 ಪುರುಷರು ಹಾಗೂ 69 ಮಹಿಳೆಯರು ಸೇರಿದಂತೆ 186 ಮಂದಿಗೆ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. 62 ಪುರುಷರು, 68 ಮಹಿಳೆಯರು ಸೇರಿದಂತೆ 130 ಮಂದಿಯಲ್ಲಿ ಸೋಂಕಿನ ಲಕ್ಷಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
322 ಮಂದಿ ಚೇತರಿಕೆ: ಕೋವಿಡ್–19 ದೃಢವಾಗಿದ್ದ 322 ಮಂದಿ ಗುಣಮುಖರಾಗಿದ್ದಾರೆ. ಹೋಂ ಐಸೋಲೇಷನ್‌ನಲ್ಲಿದ್ದ 120, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 202 ಜನರ ಗಂಟಲು ದ್ರವದ ಮಾದರಿ ವರದಿನೆಗೆಟಿವ್ ಬಂದಿದ್ದು, ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.
ಐವರ ಸಾವು: ಮಂಗಳೂರು ತಾಲ್ಲೂಕಿನ ಮೂವರು, ಬಂಟ್ವಾಳ ಹಾಗೂ ಪುತ್ತೂರು ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ದೃಢವಾಗಿದೆ. ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಇವರು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಾಸರಗೋಡು: 172 ಮಂದಿಗೆ ಸೋಂಕು
ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 172 ಮಂದಿಗೆ ಕೋವಿಡ್–19 ದೃಢಪಟ್ಟಿದೆ. ಎಲ್ಲರಿಗೂ ಪ್ರಾಥಮಿಕ ಸಂಪರ್ಕದಿಂದಲೇ ಸೋಂಕು ತಗಲಿದೆ. ಈ ಪೈಕಿ ನಾಲ್ವರು ಆರೋಗ್ಯ ಸಿಬ್ಬಂದಿ ಸೇರಿದ್ದಾರೆ.
ಮಂಗಳವಾರ 260 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದುವರೆಗೆ ಒಟ್ಟು ಸೋಂಕಿತರ ಸಂಖ್ಯೆ 7,422ಕ್ಕೆ ಏರಿಕೆಯಾಗಿದೆ. 1782 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.