ಭಾನುವಾರ, ಅಕ್ಟೋಬರ್ 25, 2020
27 °C

ಮಂಗಳೂರು: ₹33 ಲಕ್ಷ ಮೌಲ್ಯದ ಚಿನ್ನ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ದುಬೈನಿಂದ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಿಂದ ₹33.88 ಲಕ್ಷ ಮೌಲ್ಯದ 671 ಗ್ರಾಂ ಚಿನ್ನದ ಬಿಸ್ಕಿಟ್‌ಗಳನ್ನು ಕಸ್ಟಮ್ಸ್‌ನ ಗುಪ್ತಚರ ವಿಭಾಗದ ಅಧಿಕಾರಿಗಳು ಭಾನುವಾರ ವಶಪಡಿಸಿಕೊಂಡಿದ್ದಾರೆ.

ಚಿನ್ನದ ಬಿಸ್ಕಿಟ್‌ಗಳನ್ನು ವಿಮಾನದ ಸೀಟಿನ ಅಡಿಯಲ್ಲಿ ಅಡಗಿಸಿಡಲಾಗಿತ್ತು. ಈ ವಿಮಾನವು ದುಬೈ- ಮಂಗಳೂರು- ಹೈದರಾಬಾದ್ ನಡುವೆ ಸಂಚಾರ ನಡೆಸುತ್ತಿದೆ. ದುಬೈನಿಂದ ಮಂಗಳೂರು ತನಕ ಅಂತರ ರಾಷ್ಟ್ರೀಯ ವಿಮಾನವಾಗಿ ಹಾಗೂ ಮಂಗಳೂರು- ಹೈದರಾಬಾದ್ ನಡುವೆ ದೇಶೀಯ ವಿಮಾನವಾಗಿ ಸಂಚರಿಸುತ್ತಿದೆ. ಮಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುವ ಪ್ರಯಾಣಿಕ ಈ ಚಿನ್ನವನ್ನು ಸಂಗ್ರಹಿಸಿ ಕೊಂಡೊಯ್ಯುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ.

‘ದೇಶೀಯ ಯಾನ ಆಗಿರುವುದರಿಂದ ವಿಮಾನದಲ್ಲಿ ಕಟ್ಟುನಿಟ್ಟಿನ ತಪಾಸಣೆ ಇರಲಾರದು ಎಂದು ಭಾವಿಸಿ, ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಲಾಗಿತ್ತು’ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು