ಬುಧವಾರ, ಆಗಸ್ಟ್ 17, 2022
25 °C
36 ಮಂದಿಗೆ ಕೋವಿಡ್‌, 42 ಜನರು ಗುಣಮುಖ

ಮಂಗಳೂರು: ಜಿಲ್ಲೆಯಲ್ಲಿ 582 ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಮಂಗಳವಾರ 36 ಜನರಿಗೆ ಕೋವಿಡ್‌–19 ದೃಢಪಟ್ಟಿದ್ದು, 42 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ನಿಂದ ಯಾವುದೇ ಸಾವು ವರದಿಯಾಗಿಲ್ಲ.

ಇದುವರೆಗೆ ಒಟ್ಟು 3.66 ಲಕ್ಷ ಜನರ ಗಂಟಲು ದ್ರವ ಪರೀಕ್ಷಿಸಿದ್ದು, 3.34 ಲಕ್ಷ ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 31,959 ಜನರಿಗೆ ಕೋವಿಡ್ ದೃಢವಾಗಿದ್ದು, 30,664 ಜನರು ಗುಣಮುಖರಾಗಿದ್ದಾರೆ. ಸದ್ಯ 582 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ 713 ಕ್ಕೆ ಏರಿದೆ.

ಜಿಲ್ಲೆಯಲ್ಲಿ ಒಟ್ಟು 14,988 ಮಾಸ್ಕ್‌ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಮಾಡಲಾಗಿದ್ದು, ₹16.09 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕಾಸರಗೋಡಿನಲ್ಲಿ 83 ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 83 ಮಂದಿಗೆ ಕೋವಿಡ್ ದೃಢಪಟ್ಟಿದೆ. ಈ ಪೈಕಿ 78 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. ಮಂಗಳವಾರ 151 ಮಂದಿ ಗುಣಮುಖರಾಗಿದ್ದು, ಸದ್ಯ 1,018 ಸಕ್ರಿಯ ಪ್ರಕರಣಗಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು