ಮಂಗಳವಾರ, ನವೆಂಬರ್ 24, 2020
21 °C

ದ.ಕ: ಕೋವಿಡ್‌ನಿಂದ 414 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಬುಧವಾರ 414 ಮಂದಿ ಗುಣಮುಖರಾಗಿದ್ದು, 70 ಜನರಿಗೆ ಕೋವಿಡ್–19 ದೃಢಪಟ್ಟಿದೆ. ಮೃತ ಒಬ್ಬರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ.

ಇದುವರೆಗೆ 2.64 ಲಕ್ಷ ಜನರ ಗಂಟಲು ದ್ರವ ಪರೀಕ್ಷಿಸಿದ್ದು, 2.33 ಲಕ್ಷ ಜನರ ವರದಿ ನೆಗೆಟಿವ್‌ ಬಂದಿದೆ. ಒಟ್ಟು 30,585 ಮಂದಿಗೆ ಕೋವಿಡ್–19 ದೃಢವಾಗಿದ್ದು, 28,560 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 1,344 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 681ಕ್ಕೆ ಏರಿದೆ.

ದಂಡ: ಇದುವರೆಗೆ ಜಿಲ್ಲೆಯಲ್ಲಿ ಮಾಸ್ಕ್‌ ನಿಯಮ ಉಲ್ಲಂಘನೆಯ 11,120 ಪ್ರಕರಣಗಳು ಪತ್ತೆಯಾಗಿದ್ದು, ₹12.19 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 182 ಮಂದಿಗೆ ಕೋವಿಡ್ ದೃಢಪಟ್ಟಿದೆ. 175 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, ಒಟ್ಟು 181 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1,119 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ ಒಟ್ಟು 19,170 ಮಂದಿಗೆ ಸೋಂಕು ದೃಢಪಟ್ಟಿದೆ.

ಉಡುಪಿ: ಜಿಲ್ಲೆಯಲ್ಲಿ ಬುಧವಾರ 50 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, ಉಡುಪಿಯ 45 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. 61 ಮಂದಿ ಗುಣಮುಖರಾಗಿದ್ದಾರೆ.ಇದುವರೆಗೂ ಒಟ್ಟು 22,035 ಮಂದಿಗೆ ಕೋವಿಡ್‌ ದೃಢವಾಗಿದ್ದು, 21,402 ಜನರು ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.