ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 42 ಮಂದಿಗೆ ಸೋಂಕು

Last Updated 19 ಆಗಸ್ಟ್ 2020, 4:48 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 42 ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 39 ಜನರು, ವಿದೇಶ ಹಾಗೂ ಹೊರ ರಾಜ್ಯದಿಂದ ಬಂದ ತಲಾ ಒಬ್ಬರಿಗೆ ಸೋಂಕು ತಗುಲಿದೆ. ಮತ್ತೊಬ್ಬರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ. ರಾಮದಾಸ್‌ ತಿಳಿಸಿದ್ದಾರೆ.

ಉದುಮಾ ಪಂಚಾಯಿತಿ ವ್ಯಾಪ್ತಿಯ 11, ಕಾಞಂಗಾಡ್‌ ನಗರಸಭೆ ವ್ಯಾಪ್ತಿಯ ಏಳು, ಚೆಮ್ನಾಡ್‌ ಪಂಚಾಯಿತಿ ವ್ಯಾಪ್ತಿಯ ಆರು, ಚೆಂಗಳ ಪಂಚಾಯಿತಿ ವ್ಯಾಪ್ತಿಯ ಐದು, ಅಜಾನೂರು ಮತ್ತು ಕುಂಬಳೆ ಪಂಚಾಯಿತಿಗಳ ವ್ಯಾಪ್ತಿಯ ತಲಾ ಮೂವರಲ್ಲಿ ಸೋಂಕು ದೃಢಪಟ್ಟಿದೆ.

ಸೋಂಕಿತರಲ್ಲಿ 125 ಮಂದಿ ಗುಣಮುಖರಾಗಿರುವುದು ಮಂಗಳವಾರ ದೃಢಪಟ್ಟಿದೆ. ಅವರನ್ನು ಆಸ್ಪತ್ರೆಗಳು ಮತ್ತು ಕೋವಿಡ್‌ ಆರೈಕೆ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದೆ. ಸದ್ಯ 801 ಸೋಂಕಿತರು ಕಾಸರಗೋಡು ಜಿಲ್ಲೆಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ನಿಯಂತ್ರಣಕ್ಕಾಗಿ ಕಾಸರಗೋಡು ಜಿಲ್ಲೆಯ 5,093 ಜನರ ಮೇಲೆ ನಿಗಾ ಇರಿಸಲಾಗಿದೆ. ಈ ಪೈಕಿ 4,358 ಜನರು ಗೃಹ ಹಾಗೂ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. 735 ಜನರನ್ನು ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT