ಸೋಮವಾರ, ಜನವರಿ 18, 2021
25 °C

ಮಂಗಳೂರು: 42 ಮಂದಿಗೆ ಕೋವಿಡ್–19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಬುಧವಾರ 42 ಮಂದಿಗೆ ಕೋವಿಡ್–19 ದೃಢವಾಗಿದ್ದು, 22 ಜನರು ಗುಣಮುಖರಾಗಿದ್ದಾರೆ. ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ.

ಒಟ್ಟು 5.07 ಲಕ್ಷ ಜನರ ಆರೋಗ್ಯ ತಪಾಸಣೆ ಮಾಡಲಾಗಿದ್ದು, 4.74 ಲಕ್ಷ ಮಂದಿಯ ವರದಿ ನೆಗೆಟಿವ್‌ ಬಂದಿದೆ. ಒಟ್ಟು 33,080 ಜನರು ಕೋವಿಡ್–19 ದೃಢವಾಗಿದ್ದು, 31,953 ಜನರು ಗುಣಮುಖರಾಗಿದ್ದಾರೆ. ಸದ್ಯ 395 ಸಕ್ರಿಯ ಪ್ರಕರಣಗಳಿವೆ. ಒಟ್ಟು 732 ಜನರು ಮೃತಪಟ್ಟಿದ್ದಾರೆ.

ದಂಡ: ಈವರೆಗೆ ಜಿಲ್ಲೆಯಲ್ಲಿ ಮಾಸ್ಕ್‌ ಉಲ್ಲಂಘನೆಯ 20,634 ಪ್ರಕರಣ ಪತ್ತೆ ಮಾಡಿದ್ದು, ₹21.92 ಲಕ್ಷ ದಂಡ ವಸೂಲಿ ಮಾಡಲಾಗಿದೆ.

77 ಮಂದಿಗೆ ಕೋವಿಡ್: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 77 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 42 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 24,527 ಮಂದಿಗೆ ಕೋವಿಡ್ ದೃಢವಾಗಿದ್ದು, 23,455 ಜನರು ಗುಣಮುಖರಾಗಿದ್ದಾರೆ. ಸದ್ಯ 817 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಸಿಕೆಗೆ ನೋಂದಣಿ ಮಾಡಿಕೊಳ್ಳಿ
ಜಿಲ್ಲೆಯಲ್ಲಿ ಮೊದಲ ಹಂತದ ಕೋವಿಡ್–19 ಲಸಿಕೆ ಕಾರ್ಯಕ್ರಮ ಆರಂಭಿಸಲಾಗುತ್ತಿದ್ದು, ಇದೇ 7 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ನೋಂದಣಿ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

ಮೊದಲ ಹಂತದಲ್ಲಿ ಎಲ್ಲ ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರು, ಸಿಬ್ಬಂದಿ, ಖಾಸಗಿ ನರ್ಸಿಂಗ್ ಕಾಲೇಜುಗಳ ಸಿಬ್ಬಂದಿ, ವಿದ್ಯಾರ್ಥಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 39,604 ಮಂದಿ ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದೆ.

ಬಾಕಿ ಇರುವ ಅಧಿಕಾರಿ ಸಿಬ್ಬಂದಿಯ ವಿವರವನ್ನು dkrcho.covidvacc2020@gmail ಮೂಲಕ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.