ಗುರುವಾರ , ಮೇ 13, 2021
24 °C

ಕಾಸರಗೋಡಿನಲ್ಲಿ 424 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 424 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 72 ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 400 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದ್ದು, 3,258 ಸಕ್ರಿಯ ಪ್ರಕರಣಗಳಿವೆ. 10,130 ಮಂದಿ ನಿಗಾದಲ್ಲಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 35,438 ಮಂದಿಗೆ ಸೋಂಕು ದೃಢಪಟ್ಟಿದ್ದು, 31,855 ಮಂದಿ ಗುಣಮುಖರಾಗಿದ್ದಾರೆ.

ಮತ್ತಷ್ಟು ಕಠಿಣ ನಿಯಮ:

ಕೋವಿಡ್ ಸೋಂಕಿನ ಎರಡನೇ ಅಲೆ ತಡೆಗೆ ಕೇರಳದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅಂಗಡಿ ಮುಂಗಟ್ಟು ಹೋಟೆಲ್‌ಗಳ ಮೇಲೆ ನಿರ್ಬಂಧ ಹೇರಲಾಗಿದೆ. ರಾತ್ರಿ 9 ಗಂಟೆಯೊಳಗೆ ಮುಚ್ಚಲು ಆದೇಶ ಹೊರಡಿಸಲಾಗಿದೆ.

ವಿವಾಹ, ಇನ್ನಿತರ ಸಮಾರಂಭಗಳಿಗೆ ಹಾಲ್‌ಗಳಲ್ಲಿ 100, ತೆರೆದ ಸ್ಥಳಗಳಲ್ಲಿ 200 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಬಸ್, ರೈಲುಗಳಲ್ಲಿ ನಿಂತು ಪ್ರಯಾಣಕ್ಕೆ ಅನುಮತಿ ಇಲ್ಲ. ಆಸನಕ್ಕೆ ಮಾತ್ರ ಪ್ರಯಾಣಿಕರನ್ನು ಸೀಮಿತಗೊಳಿಸಬೇಕು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಿದೆ.

ಎಲ್ಲ ಕಾರ್ಯಕ್ರಮಗಳನ್ನು ಎರಡು ಗಂಟೆಯೊಳಗೆ ಮುಗಿಸಬೇಕು. ಆಹಾರ ಪೂರೈಕೆ ಪಾರ್ಸೆಲ್ ಆಗಿ ನೀಡಬೇಕು. ರಂಜಾನ್ ಅಂಗವಾಗಿ ಇಫ್ತಾರ್ ಕೂಟಗಳಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಮಿತಿ ಮೀರದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ.

ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಸ್ಥಳಗಳನ್ನು ಗುರುತಿಸಿ ಕಂಟೈನ್‌ಮೆಂಟ್‌ ವಲಯವಾಗಿ ಘೋಷಿಸಲು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲಾಗಿದೆ.

ದ.ಕ: 140 ಮಂದಿಗೆ ಕೋವಿಡ್‌

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 140 ಮಂದಿಗೆ ಕೋವಿಡ್–19 ದೃಢವಾಗಿದೆ. 97 ಜನರು ಗುಣಮುಖರಾಗಿದ್ದಾರೆ.

ಇದುವರೆಗೆ 6.74 ಲಕ್ಷ ಜನರ ಗಂಟಲು ದ್ರವ ತಪಾಸಣೆ ಮಾಡಲಾಗಿದ್ದು, 6.37 ಲಕ್ಷ ಜನರ ವರದಿ ನೆಗೆಟಿವ್ ಬಂದಿದೆ. ಒಟ್ಟು 37,140 ಜನರಿಗೆ ಕೋವಿಡ್–19 ದೃಢವಾಗಿದ್ದು, 35,245 ಮಂದಿ ಗುಣಮುಖರಾಗಿದ್ದಾರೆ. ಸದ್ಯ 1,152 ಸಕ್ರಿಯ ಪ್ರಕರಣಗಳಿವೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು