ಮಂಗಳವಾರ, ಮಾರ್ಚ್ 21, 2023
30 °C
ಬಕ್ರೀದ್ ಆಚರಣೆ: ಜಿಲ್ಲಾಡಳಿತದಿಂದ ಆದೇಶ ಪ್ರಕಟ

ಶೇ 50ರ ಪ್ರಮಾಣ ಮೀರದಂತೆ ಪ್ರಾರ್ಥನೆಗೆ ಅನುಮತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್‌ ನಿಯಂತ್ರಿಸುವ ಉದ್ದೇಶದಿಂದ ಇದೇ 21ರಂದು ನಡೆಯಲಿರುವ ಬಕ್ರೀದ್ ಹಬ್ಬದಂದು ಈದ್ಗಾದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆಯಾ ಮಸೀದಿ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ 50ರಷ್ಟು ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದೆ. 

ಒಂದೊಮ್ಮೆ ಅಧಿಕ ಜನರು ಬಂದಲ್ಲಿ ಪ್ರತ್ಯೇಕ ಬ್ಯಾಚ್‌ನಲ್ಲಿ ಮಾರ್ಗಸೂಚಿ ಅನುಸರಿಸಿ, ಆಯಾ ಮಸೀದಿಯಲ್ಲಿ ನಮಾಜ್ ನಿರ್ವಹಿಸಲು ಸಮ್ಮತಿ ಸೂಚಿಸಿದೆ. ಪ್ರಾಣಿವಧೆ ಮತ್ತು ಬಲಿದಾನ ಪ್ರಕ್ರಿಯೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ಪ್ರಾರ್ಥನಾ ಸ್ಥಳದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 65 ವರ್ಷ ಮೇಲಿನವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿ ಪ್ರಾರ್ಥನೆ ಮಾಡಬೇಕು. ನಮಾಜ್ ನಿರ್ವಹಿಸುವವರ ನಡುವೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ರಸ್ತೆ, ಪಾದಚಾರಿ ಮಾರ್ಗ, ಆಸ್ಪತ್ರೆ, ಶಾಲೆ–ಕಾಲೇಜು ಆವರಣ, ಆಟದ ಮೈದಾನ, ಮಸೀದಿ, ಧಾರ್ಮಿಕ ಸ್ಥಳದ ಆವರಣ, ಉದ್ಯಾನ, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿವಧೆ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು