ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುವೆಗೆ 50 ಜನ: ನಿಗದಿಯಾಗಿರುವ ವಿವಾಹಕ್ಕೆ ಅನುಮತಿ

ನಿಗದಿಯಾಗಿರುವ ವಿವಾಹಕ್ಕೆ ಅನುಮತಿ
Last Updated 22 ಏಪ್ರಿಲ್ 2021, 4:52 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿದ್ದು, ಜಿಲ್ಲೆಯಲ್ಲಿಯೂ ಸ್ಥಳೀಯ ಸಂಸ್ಥೆಗಳಿಗೆ ಮದುವೆ ಕಾರ್ಯಕ್ರಮಕ್ಕೆ ಕೇವಲ 50 ಜನರಿಗೆ ಸೀಮಿತವಾಗಿ ಅನುಮತಿ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ಮುಂದಿನ ಶನಿವಾರ ಹಾಗೂ ಭಾನುವಾರ ಹಲವಾರು ಮದುವೆ ನಿಗದಿಯಾಗಿರುವ ಬಗ್ಗೆ ಮಾಹಿತಿ ಇದೆ. ವಿವಾಹ ಕಾರ್ಯಕ್ರಮದಲ್ಲಿ 50 ಜನರಿಗೆ ಸೀಮಿತವಾಗಿ ಭಾಗವಹಿಸಲು ಅವಕಾಶವಿದ್ದು, ಎಲ್ಲರಿಗೂ ಪಾಸ್ ನೀಡುವುದು ಕಷ್ಟಸಾಧ್ಯ. ಮದುವೆಯಲ್ಲಿ ಭಾಗವಹಿಸುವ 50 ಮಂದಿಯನ್ನು ಒಳಗೊಂಡ ಅತಿಥಿ ಪಟ್ಟಿಗೆ ಸ್ಥಳೀಯಾಡಳಿತಗಳಿಂದ ಅನುಮತಿ ಪಡೆಯಬೇಕು ಎಂದು ತಿಳಿಸಿದರು.

ಅನುಮತಿ ಪಡೆದಿರುವ ಪಟ್ಟಿಯಲ್ಲಿ ಹೆಸರು ಇರುವವರಿಗೆ ಮಾತ್ರ ಕರ್ಫ್ಯೂ ಸಂದರ್ಭದಲ್ಲಿ ಮದುವೆಯ ನಿಗದಿತ ಸ್ಥಳಗಳಲ್ಲಿ ತೆರಳಲು ಅವಕಾಶ ನೀಡಲಾಗುತ್ತದೆ. ಅನುಮತಿ ಪತ್ರದ ಪ್ರತಿ, ಮದುವೆ ಆಮಂತ್ರಣ ಪತ್ರಿಕೆ ಹಾಗೂ ತಮ್ಮ ಫೋಟೋ ಇರುವ ಗುರುತಿನ ಚೀಟಿಯನ್ನು ತಪಾಸಣಾ ಅಧಿಕಾರಿಗಳಿಗೆ ತೋರಿಸಬೇಕು ಎಂದು ಹೇಳಿದರು.

ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ, ಪೂಜೆಯಲ್ಲಿ ತೊಡಗಿರುವ ಸಿಬ್ಬಂದಿ ದೈನಂದಿನ ಪ್ರಾರ್ಥನಾ ವಿಧಿಗಳನ್ನು ಭಕ್ತರಿಲ್ಲದೆ ನಿರ್ವಹಿಸಬಹುದಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT