ಬೆಳ್ತಂಗಡಿ: ಕರಾವಳಿ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿ ಈ ವರ್ಷದ ಬಜೆಟ್ನಲ್ಲಿ
₹ 500 ಕೋಟಿ ಅನುದಾನ ಮೀಸಲಿಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ' ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂಗಳೂರು ಎನ್ಐಟಿ ಕಾಲೇಜನ್ನು ಮೇಲ್ದರ್ಜೆಗೇರಿಸಿ ಐಐಟಿ ಕಾಲೇಜಾಗಿ ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲಾಗುವುದು. ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಲು ಪ್ರಸ್ತಾವನೆ ನೀಡಲಾಗಿದೆ’ ಎಂದರು.

'ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಯಾವುದೇ ತೊಂದರೆಯಾಗುತ್ತಿಲ್ಲ. ಬಿಪಿಎಲ್ ಪಡಿತರ ಚೀಟಿ ರದ್ದು ಮಾಡಿರುವ ಬಗೆಗಿನ ಆರೋಪ ಸುಳ್ಳು. ಅಂಕಿ ಅಂಶ ಪ್ರಕಾರ ಕೇವಲ 806 ಬಿಪಿಎಲ್ ಕಾರ್ಡ್ ರದ್ದಾಗಿವೆ' ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ನಾಗೇಶ್ ಕುಮಾರ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷ ನಮಿತಾ ಕೆ. ತೋಟತ್ತಾಡಿ, ವಂದನಾ ಭಂಡಾರಿ, ಕೆಡಿಪಿ ಸದಸ್ಯ ಸಂತೋಷ್ ಬಿ. ಎಲ್, ಹಕೀಂ ಕೊಕ್ಕಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.