ಮಂಗಳವಾರ, ಜನವರಿ 26, 2021
22 °C
39 ಮಂದಿಗೆ ಕೋವಿಡ್ ದೃಢ: 28 ಗುಣಮುಖ

539ಕ್ಕೆ ಇಳಿದ ಸಕ್ರಿಯ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಜಿಲ್ಲೆಯಲ್ಲಿ ಬುಧವಾರ 39 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು, 28 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಒಬ್ಬರಲ್ಲಿ ಕೋವಿಡ್‌ ಇರುವುದು ಪತ್ತೆಯಾಗಿದೆ.

ಒಟ್ಟು 3.46 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, 3.14 ಲಕ್ಷ ಮಂದಿಯ ವರದಿ ನೆಗೆಟಿವ್‌ ಬಂದಿದೆ. ಒಟ್ಟು 31,664 ಜನರಿಗೆ ಕೋವಿಡ್‌–19 ದೃಢವಾಗಿದ್ದು, 30,416 ಜನರು ಗುಣಮುಖರಾಗಿದ್ದಾರೆ. ಸದ್ಯ 539 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 709ಕ್ಕೆ ಏರಿದೆ.

ದಂಡ: ಮಾಸ್ಕ್‌ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 14,244 ಪ್ರಕರಣಗಳ ಪತ್ತೆ ಮಾಡಲಾಗಿದ್ದು, ಒಟ್ಟು ₹15.37 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಕಾಸರಗೋಡಿನಲ್ಲಿ 103 ಪ್ರಕರಣ: ಕಾಸರಗೋಡು ಜಿಲ್ಲೆಯಲ್ಲಿ 103 ಮಂದಿಗೆ ಕೋವಿಡ್ ದೃಢವಾಗಿದೆ. 64 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 21,373 ಮಂದಿಗೆ ಕೋವಿಡ್ ದೃಢವಾಗಿದ್ದು, 20,131 ಮಂದಿಗೆ ಗುಣಮುಖರಾಗಿದ್ದಾರೆ. ಸದ್ಯ 1,016 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟವರ ಸಂಖ್ಯೆ 226 ಕ್ಕೆ ಏರಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು