ಮುಡಿಪು: ‘ಹಲವಾರು ವ್ಯವಸ್ಥಿತವಾದ ಯೋಜನೆ, ನಿಯಮಗಳಿಂದಾಗಿ ರಾಜ್ಯ ಸಾರಿಗೆ ಸಂಸ್ಥೆಯು ಭಾರತದಲ್ಲಿ ಅತ್ಯುತ್ತಮ ಸಂಸ್ಥೆಯಾಗಿ ಗುರುತಿಸಿಕೊಂಡಿದೆ’ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಹೇಳಿದರು.

ಬಂಟ್ವಾಳ ತಾಲ್ಲೂಕಿನ ಪಜೀರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬ್ಲಪದವಿನಲ್ಲಿ ಸುಮಾರು ₹17 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಭಾರಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕೆ ಶನಿವಾರ ಶಿಲಾನ್ಯಾಸ ಮಾಡಿ ಅವರು ಮಾತನಾಡಿದರು.

‘ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಂಚಾರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಈ ಭಾರೀ ವಾಹನ ಚಾಲನಾ ತರಬೇತಿ ಕೇಂದ್ರದಿಂದ ಬಹಳಷ್ಟು ಪ್ರಯೋಜನವಾಗಲಿದೆ’ ಎಂದರು.

‘ರಾಜ್ಯದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡುವ ನಿಟ್ಟಿನಲ್ಲಿ ತರಬೇತಿ ಸೇರಿದಂತೆ ಹಲವಾರು ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ರೈತ ಸಾರಥಿ ಯೋಜನೆಯಲ್ಲಿ ಸುಮಾರು 5 ಲಕ್ಷ ಟ್ರ್ಯಾಕ್ಟರ್ ವಾಹನ ಚಾಲಕರಿದ್ದು, 3 ಲಕ್ಷ ಮಂದಿ ಮಾತ್ರ ಚಾಲನಾ ಪರವಾನಗಿ ಹೊಂದಿದ್ದಾರೆ. ಉಳಿದವರಿಗೆ ಪರವಾನಗಿ ಕೊಡುವ ಚಿಂತನೆ ಇದೆ’ ಎಂದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ರಮಾನಾಥ ರೈ, ‘ಭಾರಿ ವಾಹನ ಚಾಲನಾ ತರಬೇತಿ ಕೇಂದ್ರಕ್ಕಾಗಿ ಹಲವು ವರ್ಷಗಳಿಂದ ಬೇಡಿಕೆಯಿಟ್ಟಿದ್ದೆವು. ಎರಡು ಬಾರಿ ಇದಕ್ಕೆ ಹಿನ್ನಡೆಯಾಗಿದ್ದು, ಮೂರನೇ ಬಾರಿ ಯಶಸ್ವಿಯಾಗಿ ಇಂದು ಶಿಲ್ಯಾನ್ಯಾಸವೂ ನಡೆದಿದೆ. ಬಂಟ್ವಾಳದಲ್ಲಿ ಇನ್ನು ಕೆಲವೇ ದಿನಗಳಲ್ಲಿ ಆರ್‍ಟಿಒ ಕಚೇರಿ ಆರಂಭಗೊಳ್ಳಲಿದೆ’ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಯು.ಟಿ.ಖಾದರ್ ಅವರು, ‘ಚಾಲನಾ ತರಬೇತಿ ಸಂಸ್ಥೆ ಈ ಭಾಗದ ಅಭಿವೃದ್ಧಿಗೆ ಸಹಕಾರಿಯಾಗಲಿದೆ. ನಮ್ಮ ಮುಂದಿನ ಪ್ರಯತ್ನ ಸಮಗ್ರ ಕುಡಿಯುವ ನೀರಿನ ಯೋಜನೆ ಆಗಿದೆ’ ಎಂದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ, ಪಜೀರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೀತಾರಾಮ ಶೆಟ್ಟಿ, ಉಪಾಧ್ಯಕ್ಷೆ ಜ್ಯೋತಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಗಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ನವೀನ್ ಪಾದಲ್ಪಾಡಿ, ಮಂಗಳೂರು ತಾಲ್ಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮೋನು, ಹೈದರ್ ಕೈರಂಗಳ, ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಕೊಣಾಜೆ ಪಂಚಾಯಿತಿ ಅಧ್ಯಕ್ಷ ಶೌಕತ್ ಆಲಿ, ರಮೇಶ್ ಶೆಟ್ಟಿ ಬೋಳಿಯಾರ್, ಟಿ.ಕೆ.ಸುಧೀರ್ ಇದ್ದರು.

ಬೆಂಗಳೂರು ಸಾರಿಗೆ ಇಲಾಖೆಯ ಆಯುಕ್ತರಾದ ಬಿ.ದಯಾನಂದ ಪಾಸ್ತಾವಿಕವಾಗಿ ಮಾತನಾಡಿದರು. ಶಿವಮೊಗ್ಗ ವಿಭಾಗದ ಜಂಟಿ ಸಾರಿಗೆ ಆಯುಕ್ತ ಶಿವರಾಜ್ ಪಾಟೀಲ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.