ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

60 ಮಂದಿಗೆ ಕೋವಿಡ್‌

Last Updated 13 ನವೆಂಬರ್ 2020, 16:58 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 67 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, 72 ಮಂದಿ ಮಂದಿ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿನ ಒಟ್ಟು 31,185 ಮಂದಿಗೆ ಕೋವಿಡ್ ದೃಢವಾಗಿದ್ದು, ಈ ಪೈಕಿ 29,622 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 873 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 690 ಕ್ಕೆ ಏರಿದೆ.

ದಂಡ: ಜಿಲ್ಲೆಯಲ್ಲಿ 12,478 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ₹13,55,332 ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಕಾಸರಗೋಡಿನಲ್ಲಿ 81 ಪ್ರಕರಣ: ಜಿಲ್ಲೆಯಲ್ಲಿ ಶುಕ್ರವಾರ 81 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 75 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 157 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ 20,201 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಸದ್ಯ 1,370 ಮಂದಿ ಚಿಕಿತ್ಸೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT