ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಗಳೂರು | 8.65 ಕೆ.ಜಿ. ಗಾಂಜಾ ವಶ; ಇಬ್ಬರ ಬಂಧನ

Published : 13 ಸೆಪ್ಟೆಂಬರ್ 2024, 4:13 IST
Last Updated : 13 ಸೆಪ್ಟೆಂಬರ್ 2024, 4:13 IST
ಫಾಲೋ ಮಾಡಿ
Comments

ಮಂಗಳೂರು: ನಿಷೇಧಿತ ಮಾದಕ ಪದಾರ್ಥ ಗಾಂಜಾವನ್ನು ಕಳ್ಳಸಾಗಣೆ ಮಾಡಿ ತಲಪಾಡಿ ದೇವಿಪುರ ರಸ್ತೆಯ ತಚ್ಚಾಣಿ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 8.65 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಒಡಿಶಾದ ಗಜಪತಿ ಜಿಲ್ಲೆಯ ಪಿಂಡಿಕ್ಕಿಯ ಬುಲುಬಿರೊ (24) ಹಾಗೂ ಪಶ್ವಿಮ ಬಂಗಾಳದ  ಮುರ್ಶಿದಾಬಾದ್‌ ಜಿಲ್ಲೆಯ ಲಾಲ್‌ಗೋಲ ತಾಲ್ಲೂಕಿನ ದಿಲ್ ದಾರ್ ಆಲಿ (28 ) ಬಂಧಿತರು. ಆರೋಪಿಗಳು ಒಡಿಷಾದಲ್ಲಿ ಗಾಂಜಾ ಖರೀದಿಸಿ, ಅದನ್ನು ರೈಲಿನಲ್ಲಿ ಬೆಂಗಳೂರಿಗೆ ಸಾಗಿಸಿದ್ದರು. ಅಲ್ಲಿಂದ ಬಸ್‌ನಲ್ಲಿ ಮಂಗಳೂರಿಗೆ ಸಾಗಿಸಿದ್ದರು. ಕರ್ನಾಟಕ ಮತ್ತು ಕೇರಳದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಸಿದ್ಧತೆ ನಡೆಸಿದ್ದರು. ಆರೋಪಿಗಳಿಂದ ವಶಪಡಿಸಿಕೊಂಡ ಗಾಂಜಾದ ಮೌಲ್ಯ ₹ 2.60 ಲಕ್ಷ. ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್‌ಗಳು ಸೇರಿದಂತೆ ಆರೋಪಿಗಳಿಂದ ₹ 3. ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್  ನೇತೃತ್ವದಲ್ಲಿ ನಡೆದ ಪತ್ತೆ ಕಾರ್ಯದಲ್ಲಿ ಇನ್‌ಸ್ಪೆಕ್ಟರ್‌  ಶ್ಯಾಮಸುಂದರ್ ಎಚ್.ಎಂ, ಪಿಎಸ್ಐ ಶರಣಪ್ಪ ಭಂಡಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ದಿಲ್‌ದಾರ್‌ ಆಲಿ
ದಿಲ್‌ದಾರ್‌ ಆಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT