ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 91 ಮಂದಿಗೆ ಸೋಂಕು ದೃಢ

Last Updated 4 ಆಗಸ್ಟ್ 2020, 15:24 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 91 ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

‘76 ಜನರಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್‌ ತಗುಲಿದೆ. ವಿದೇಶ ಮತ್ತು ಹೊರ ರಾಜ್ಯಗಳಿಂದ ಬಂದಿರುವ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. 11 ಜನರ ಸೋಂಕಿನ ಮೂಲವನ್ನು ಪತ್ತೆಮಾಡಲಾಗುತ್ತಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ.ರಾಮದಾಸ್‌ ತಿಳಿಸಿದ್ದಾರೆ.

ಉದುಮದಲ್ಲಿ 27, ಕಾಸರಗೋಡಿನಲ್ಲಿ 18, ಅಜನೂರಿನಲ್ಲಿ ಒಂಭತ್ತು ಮಂದಿಗೆ ಸೋಂಕು ತಗುಲಿದೆ. ಉಳಿದಂತೆ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಡಿಮೆ ಸಂಖ್ಯೆಯ ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾಗಿರುವ 25 ಜನರು ಮಂಗಳವಾರ ಕಾಸರಗೋಡಿನ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕೋವಿಡ್‌ ಸೋಂಕು ಹರಡದಂತೆ ತಡೆಯಲು ಕಾಸರಗೋಡು ಜಿಲ್ಲೆಯಲ್ಲಿ 2,888 ಜನರನ್ನು ಹೋಂ ಕ್ವಾರಂಟೈನ್‌ ಹಾಗೂ 1,144 ಜನರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. 308 ಜನರನ್ನು ವೈದ್ಯಕೀಯ ನಿಗಾದಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. 65 ಜನರನ್ನು ಆಸ್ಪತ್ರೆಗಳಲ್ಲಿ ಐಸೋಲೇಷನ್‌ ವಾರ್ಡ್‌ಗಳಲ್ಲಿ ದಾಖಲಿಸಲಾಗಿದೆ ಎಂದು ಅಲ್ಲಿನ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT