ಮಂಗಳೂರು: ‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮೂನೆ 9/11ರ ಅರ್ಜಿಗಳಿಗೆ ಸರ್ಕಾರಿ ಕಚೇರಿಯಲ್ಲಿ ದೂಳು ಹಿಡಿಯುತ್ತಿದೆ. ಏಕನಿವೇಶನದಲ್ಲಿ ಮನೆ ಕಟ್ಟಲು ಸಾಧ್ಯವಾಗದೇ ಜನರು ಕಚೇರಿಯಿಂದ ಕಚೇರಿಗೆ ಅಲೆಯುವಂತಾಗಿದೆ’ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಆರೋಪಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಏಕ ನಿವೇಶನದಲ್ಲಿ ಮನೆ ನಿರ್ಮಿಸಲು ವಿನ್ಯಾಸದ ನಕ್ಷೆಗೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ಮಂಜೂರಾತಿ ಪಡೆಯಬೇಕು ಎಂಬ ನಿಯಮ ರೂಪಿಸಲಾಗಿದೆ. ಆಡಳಿತವನ್ನು ಸರಳ ಗೊಳಿಸಿ ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕಾದ ಸರ್ಕಾರವೇ ಸರಳವಾಗಿದ್ದ ನಿಯಮಗಳನ್ನು ಜಟಿಲಗೊಳಿಸಿದೆ. ಭ್ರಷ್ಟಾಚಾರವನ್ನೇ ಕಾರ್ಯಸೂಚಿಯನ್ನಾಗಿ ಮಾಡಿಕೊಂಡ ರಾಜ್ಯ ಸರ್ಕಾರರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.

‘ಎರಡು ವರ್ಷಗಳಿಂದ ಯಾವುದೇ ಹೊಸ ಆಶ್ರಯ ಮನೆ ಮಂಜೂರು ಮಾಡಿಲ್ಲ. ಆದಾಯ ಮಿತಿಯ ನೆಪ ಒಡ್ಡಿ ವೃದ್ಧಾಪ್ಯ ವೇತನ ಸೌಲಭ್ಯಕ್ಕೂ ಸರ್ಕಾರ ಕತ್ತರಿ ಹಾಕಲು ಹೊರಟಿದೆ. ವಿದ್ಯುತ್ ದರ ಹೆಚ್ಚಳ ಮಾಡಿದೆ. ಉಚಿತ ಸೌಲಭ್ಯ ಕೊಟ್ಟ ಹಾಗೆ ಮಾಡಿ ಜನರನ್ನು ದೋಚುತ್ತಿದೆ. ಈ ಅನ್ಯಾಯವನ್ನು ಖಂಡಿಸಿ ಪಕ್ಷದ ವತಿಯಿಂದ ಇದೇ 23 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ಬಳಿ ಧರಣಿ ನಡೆಸಲಿದ್ದೇವೆ’ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಶಾಂತಿ ಪ್ರಸಾದ್ ಹೆಗ್ಡೆ, ರವೀಂದ್ರ ಶೆಟ್ಟಿ, ಕಾರ್ಯದರ್ಶಿ ಪೂರ್ಣಿಮಾ, ಖಜಾಂಚಿ ಸಂಜಯ್ ಪ್ರಭು, ವಕ್ತಾರ ರಾಜಗೋಪಾಲ್ ರೈ ಹಾಗೂ ಮುಖಂಡ ಪ್ರಭಾಕರ್ ಪ್ರಭು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.