ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಂದಾಪುರ: ಕೊಡ್ಗಿಗೆ ಭಾವಪೂರ್ಣ ವಿದಾಯ

Last Updated 15 ಜೂನ್ 2022, 6:01 IST
ಅಕ್ಷರ ಗಾತ್ರ

ಕುಂದಾಪುರ: ಸೋಮವಾರ ನಿಧನರಾದ ಮಾಜಿ ಶಾಸಕ ಎ.ಗೋಪಾಲಕೃಷ್ಣ ಕೊಡ್ಗಿ (ಎ.ಜಿ.ಕೊಡ್ಗಿ) ಅವರ ಅಂತ್ಯಕ್ರಿಯೆ ತಾಲ್ಲೂಕಿನ ಅಮಾಸೆಬೈಲಿನ ಸ್ವಗೃಹದಲ್ಲಿ ಮಂಗಳವಾರ ಮಧ್ಯಾಹ್ನ ನಡೆಯಿತು.

ಮನೆ ಸಮೀಪದ ಗೋಕುಲ್ ಗೇರು ಕಾರ್ಖಾನೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಇರಿಸಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಅಭಿಮಾನಿಗಳು ಹಾಗೂ ಕುಟುಂಬಿಕರು ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರು.

ಗೌರವ ರಕ್ಷೆ: ದಿವಂಗತ ಕೊಡ್ಗಿಯವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಸರ್ಕಾರದ ವತಿಯಿಂದ ಗೌರವ ರಕ್ಷೆ ನೀಡಲಾಯಿತು. ಮೃತ ದೇಹಕ್ಕೆ ಹೊದಿಸಲಾದ ತ್ರಿವರ್ಣ ಧ್ವಜವನ್ನು ಕುಂದಾಪುರ ಉಪ ವಿಭಾಗಾಧಿಕಾರಿ ರಾಜು.ಕೆ ಅವರು ಕೊಡ್ಗಿ ಅವರ ಹಿರಿಯ ಪುತ್ರ ಅಶೋಕಕುಮಾರ ಕೊಡ್ಗಿ ಅವರಿಗೆ ಹಸ್ತಾಂತರಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‍ಚಂದ್ರ ಶೆಟ್ಟಿ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕ್ಯಾಪ್ಟನ್ ಗಣೇಶ್ ಕಾರಣಿಕ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಪ್ರಮೋದ್ ಮಧ್ವರಾಜ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯ್ಕ್ ಇದ್ದರು.

ಅಂತಿಮ ದರ್ಶನ ಪಡೆದ ಗಣ್ಯರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಲಾಲಾಜಿ ಮೆಂಡನ್, ವಿನಯಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉದ್ಯಮಿ ಜಿ.ಶಂಕರ್, ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾಧಿಕಾರಿ ಎಮ್.ಕೂರ್ಮರಾವ್, ಬಿ.ಅಪ್ಪಣ್ಣ ಹೆಗ್ಡೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್‌ಕುಮಾರ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ್ ಹೆಗ್ಡೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ್ ಉಡುಪ, ತಹಸೀಲ್ದಾರ್ ಕಿರಣ್ ಗೌರಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ಶ್ವೇತಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರುಗಾರ್, ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಉಪಾಧ್ಯಕ್ಷ ಸಂದೀಪ್ ಖಾರ್ವಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಲತಾ ಹೆಗ್ಡೆ, ಬಾಬು ಶೆಟ್ಟಿ ತಗ್ಗರ್ಸೆ, ಶಂಕರ ಪೂಜಾರಿ ಯಡ್ತರೇ, ರೋಹಿತ್ ಶೆಟ್ಟಿ ಸಿದ್ದಾಪುರ, ಸುರೇಶ್ ಬಟವಾಡಿ, ಮಾರಾಳಿ ಪ್ರತಾಪ್ ಹೆಗ್ಡೆ, ಜ್ಯೋತಿ.ವಿ.ಪುತ್ರನ್, ಸುಪ್ರೀತಾ ಉದಯ್ ಕುಲಾಲ್, ಸುಧಾಕರ್ ಕುಲಾಲ್, ಮಮತಾ ಆರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಬಿ.ಹಿರಿಯಣ್ಣ, ಮಲ್ಯಾಡಿ ಶಿವರಾಮ್ ಶೆಟ್ಟಿ, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್‌ಕುಮಾರ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಪಾರ್ಥಿವ ಶರೀರದ ದರ್ಶನ ಪಡೆದುಕೊಂಡು ಅಂತಿಮ ನಮನ ಸಲ್ಲಿಸಿದರು.

ಅಂತಿಮ ದರ್ಶನಕ್ಕಾಗಿ ಬರುವವರಿಗೆ ನೂಕು ನುಗ್ಗಲಾಗದಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿತ್ತು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಸರ್ಕಲ್ ಇನ್‌ಸ್ಪೆಕ್ಟರ್ ಗೋಪಿಕೃಷ್ಣ, ಎಸ್.ಐ ಶ್ರೀಧರ ನಾಯಕ್, ಸುಬ್ಬಣ್ಣ, ಸಂಗೀತಾ, ಸುಹಾಸ್ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಭಾವುಕ ಕ್ಷಣ

ಗುರುವಿನ ಅಂತಿಮ ದರ್ಶನಕ್ಕಾಗಿ ಬಂದಿದ್ದ ಶೋಭಾ ಕರಂದ್ಲಾಜೆ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರು, ಪಾರ್ಥಿವ ಶರೀರಕ್ಕೆ ಪುಷ್ಟ ಗೌರವವನ್ನು ಸಲ್ಲಿಸುವಾಗ ಭಾವುಕರಾಗಿ ಕಣ್ಣಾಲಿಗಳಲ್ಲಿ ನೀರು ತುಂಬಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT