ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರೇಕಳದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ಸಾವು

Published 20 ಮೇ 2024, 13:13 IST
Last Updated 20 ಮೇ 2024, 13:13 IST
ಅಕ್ಷರ ಗಾತ್ರ

ಉಳ್ಳಾಲ: ಹರೇಕಳದ ನ್ಯೂಪಡ್ಪು ಶಾಲೆಯ ಆವರಣಗೋಡೆ ಕುಸಿದು ವಿದ್ಯಾರ್ಥಿನಿ ಸೋಮವಾರ ಸಾವಿಗೀಡಾಗಿದ್ದಾಳೆ.

ನ್ಯೂಪಡ್ಪು ನಿವಾಸಿ ಸಿದ್ದೀಕ್‌– ಜಮೀಲಾ ದಂಪತಿಯ ಪುತ್ರಿ ಶಾಜಿಯಾ (7) ಮೃತ ಬಾಲಕಿ.

ಹರೇಕಳ ಹಾಜಬ್ಬ ಅವರ ಪ್ರಯತ್ನದಿಂದ ಆರಂಭವಾದ ಈ ಶಾಲೆಯಲ್ಲಿ ಮುಡಿಪು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರೀಯ ಸೇವಾ ಯೋಜನೆಯ (ಎನ್‌ಎಸ್‌ಎಸ್‌) ಶಿಬಿರ ನಡೆಯುತ್ತಿತ್ತು. ನ್ಯೂಪಡ್ಪು ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಜಿಯಾ ಶಿಬಿರ ನಡೆಯುತ್ತಿದ್ದ ಸ್ಥಳಕ್ಕೆ ಹೋಗಿದ್ದಳು. ಬಾಲಕಿಯು ಗೇಟಿನಲ್ಲಿ ಆಟವಾಡುತ್ತಿದ್ದ ಸಂದರ್ಭ ಆವರಣ ಗೋಡೆಯು ಆಕೆಯ ಮೇಲೆ ಕುಸಿದು ಬಿದ್ದಿತ್ತು.

ಮಳೆಯಿಂದಾಗಿ ಆವರಣಗೋಡೆ ಒದ್ದೆಯಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ದುರ್ಘಟನೆ ಸಂಭವಿಸಿದ ಸ್ಥಳದಲ್ಲಿ ಜನ ಗುಂಪುಗೂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT