ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ ಕಾರ್ಮಿಕರೊಬ್ಬರು ಮಲಗಿದ್ದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಗೊಲ್ಲರಹಟ್ಟಿ ಮಹಾಲಿಂಗಪ್ಪ (60) ಮೃತಪಟ್ಟವರು. ಮಹಾಲಿಂಗಪ್ಪ ಅವರು ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ ಕಳೆದ ಐದು ವರ್ಷಳಿಂದ ಕೆಲಸ ಮಾಡಿಕೊಂಡಿದ್ದು, ಗೋಶಾಲೆಯಲ್ಲೆ ಉಳಿದುಕೊಳ್ಳುತ್ತಿದ್ದರು. ರಾತ್ರಿ ಮಹಾಲಿಂಗಪ್ಪ ಅವರು ಮಲಗಿದ್ದು, ಮರುದಿನ ಬೆಳಿಗ್ಗೆ ಅವರು ಏಳದೇ ಇದ್ದುದರಿಂದ ವೈದ್ಯರನ್ನು ಕರೆಸಿ ಪರೀಕ್ಷಿಸಿದ ವೇಳೆ ಅವರು ಮೃತಪಟ್ಟಿರುವುದು ಗೊತ್ತಾಗಿದೆ. ಹೃದಯಾಘಾತ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವ ಸಾಧ್ಯತೆ ಇದ್ದು, ಸುಬ್ರಹ್ಮಣ್ಯ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.