ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆರಾಟ ಕನ್ನಡ ಚಿತ್ರ ನಾಳೆ ತೆರೆಗೆ

Published 20 ಜೂನ್ 2024, 5:30 IST
Last Updated 20 ಜೂನ್ 2024, 5:30 IST
ಅಕ್ಷರ ಗಾತ್ರ

ಮಂಗಳೂರು: ಪಿಎನ್‌ಆರ್ ಪ್ರೊಡಕ್ಷನ್ ನಿರ್ಮಿಸಿರುವ ಆರಾಟ ಕನ್ನಡ ಸಿನಿಮಾ ಇದೇ 21ರಂದು ತೆರೆ ಕಾಣಲಿದೆ ಎಂದು ಚಿತ್ರದ ನಿರ್ದೇಶಕ ಪುಷ್ಪರಾಜ್ ರೈ ಮಲಾರಬೀಡು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ಮತ್ತು ಕೇರಳ ಗಡಿಭಾಗ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಚಿತ್ರೀಕರಣಗೊಂಡಿರುವ ಚಿತ್ರದ ಚಿತ್ರದ ಟೀಸರ್, ಟ್ರೇಲರ್ ಹಾಗೂ 2 ಹಾಡುಗಳನ್ನು ಈಗಾಗಲೇ ಬಿಡುಗಡೆಗೊಳಿಸಲಾಗಿದೆ ಎಂದು ಅವರು ತಿಳಿಸಿದರು. ಸಿನಿಮಾದ ಮೂಲಕಥೆ ರಾಘವೇಂದ್ರ ಹೊಳ್ಳ ಅವರದು. ರವಿ ಸುವರ್ಣ ಛಾಯಾಗ್ರಹಣ ನಿರ್ವಹಿಸಿದ್ದು, ದಾಮು ಕನ್ಸೂರ್ ಸಂಕಲನ ಮಾಡಿದ್ದಾರೆ. ರಾಘವೇಂದ್ರ ಬೀಜಾಡಿ ಹಾಗೂ ಶಮೀರ್ ಮುಡಿಪು ಸಂಗೀತ ನೀಡಿದ್ದಾರೆ.

ಎಚ್.ಎಸ್. ವೆಂಕಟೇಶ್ ಮೂರ್ತಿ ಹಾಗೂ ಯೋಗೀಶ್ ಅವರ ಗೀತೆಗಳನ್ನು ಶಮೀರ್ ಮುಡಿಪು ಹಾಗೂ ಶಾಲಿನಿ ಎಸ್.ಆರ್ ಹಾಡಿದ್ದು, ವಸ್ತ್ರ ವಿನ್ಯಾಸವನ್ನು ಶರತ್ ಪೂಜಾರಿ ಮಾಡಿದ್ದಾರೆ. ಚರಣ್ ರಾಜ್ ಪಚ್ಚಿನಡ್ಕ ಪ್ರಸಾಧನ, ಹರೀಶ್ ಆಚಾರ್ಯ ಕಲಾ ವಿನ್ಯಾಸ ನಿರ್ವಹಿಸಿದ್ದಾರೆ ಎಂದು ಅವರು ತಿಳಿಸಿದರು.‌

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತಿಯ ಪ್ರವೀಣ ರಂಜನ್ ಕಾಸರಗೋಡು, ವೆನ್ಯ ರೈ, ಜ್ಯೋತಿಶ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ರಾಜ್ ಉಪ್ಪಳ, ಚೇತನ್ ರೈ ಮಾಣಿ, ರವಿ ರಾಮಕುಂಜ, ಸುರೇಶ್ ಮಂಜೇಶ್ವರ, ಪ್ರಭಾಕರ್ ಕಾಸರಗೋಡು, ತೇಜಸ್ವಿನಿ ಕಿಶೋರ್, ಸಂದೀಪ್ ಭಕ್ತ, ಆಶಾ ಮಾರ್ನಾಡ್, ನಯನಾ ಸಾಲ್ಯಾನ್, ದೀಕ್ಷಾ ಭಾಗ್ಯರಾಜ್ ನಾವೂರು, ವಿನೋದ್ ಶೆಟ್ಟಿ ಸಂಕೇತ್, ಉದಯ ಶೆಟ್ಟಿ ಇಡ್ಯಾ, ಉತ್ಸವ್ ವಾಮಂಜೂರ್, ತುಳಸೀಧರನ್, ಶಶಿ ಗುಜರನ್ ಪಡುಬಿದ್ರಿ ನಟಿಸಿದ್ದಾರೆ ಎಂದರು.

ನಾಯಕ ನಟ ರಂಜನ್ ಕಾಸರಗೋಡು ಮಾತನಾಡಿ ಚಿತ್ರದಲ್ಲಿ ಕರಾವಳಿಯ ಸೊಗಡನ್ನು ಚಿತ್ರಿಸಲಾಗಿದೆ ಎಂದರು. ನಿರ್ಮಾಪಕ ರಾಘವೇಂದ್ರ ಹೊಳ್ಳ, ಸಂಗೀತ ನಿರ್ದೇಶಕ ಸಮೀರ್ ಮುಡಿಪು, ನಟ ಜ್ಯೋತಿಷ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಯೋಗೀಶ್ ಕೆ.ಎನ್, ಜ್ಯೋತಿಷ್ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT