ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತಾಲ್ಲೂಕಿನಾದ್ಯಂತ ಆಟಿ ಅಮಾವಾಸ್ಯೆಯ ಸಂಭ್ರಮ

Published 4 ಆಗಸ್ಟ್ 2024, 16:50 IST
Last Updated 4 ಆಗಸ್ಟ್ 2024, 16:50 IST
ಅಕ್ಷರ ಗಾತ್ರ

ಬೆಳ್ತಂಗಡಿ: ತಾಲ್ಲೂಕಿನಾದ್ಯಂತ ಆಟಿ ಅಮವಾಸ್ಯೆಯನ್ನು ಭಾನುವಾರ ಭಕ್ತಿ ಭಾವದಿಂದ ಆಚರಿಸಲಾಯಿತು. ತಾಲ್ಲೂಕಿನ ಎಲ್ಲಾ ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆದವು. ಮಳೆಯ ಅಬ್ಬರ ಕಡಿಮೆಯಾಗಿದ್ದರಿಂದ ಜನರಿಗೆ ಆಟಿ ಅಮವಾಸ್ಯೆ ಸಂಪ್ರದಾಯಗಳನ್ನು ಆಚರಿಸಲು ಅನುಕೂಲವಾಯಿತು. ದೇವಸ್ಥಾನಗಳಲ್ಲಿ  ಭಕ್ತರ ದಟ್ಟಣೆ ಇತ್ತು.

ಸುರ್ಯ ಸದಾಶಿವೇಶ್ವರ ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರು ದೇವರ ದರ್ಶನ ಪಡೆದರು. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹರ್ಷ ಸಂಪಿಗೆತ್ತಾಯ ಇದ್ದರು.

ಸವಣಾಲು  ಕ್ಷೇತ್ರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ  ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ‘ಸವಣಾಲು ಆದಿನಾಥ ಜಿನ ಮಂದಿರದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ₹9 ಲಕ್ಷ ಅನುದಾನ ಮಂಜೂರಾತಿಗೆ ಸಹಕರಿಸಿದ ರಕ್ಷಿತ್ ಶಿವರಾಂ ಅವರನ್ನು ಸಮಿತಿಯವರು ಗೌರವಿಸಿದರು.

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್  ಬೆಳ್ತಂಗಡಿ ತಾಲ್ಲೂಕು ಘಟಕದಿಂದ ಆಟಿ ಅಮಾವಾಸ್ಯೆ ಪ್ರಯುಕ್ತ  ದೀಪಕ್ ಜಿ. ಬೆಳ್ತಂಗಡಿ ನೇತೃತ್ವದಲ್ಲಿ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಆಟಿ ಕಷಾಯ ವಿತರಣೆ ನಡೆಯಿತು. ಸಂಘಟನೆಯ ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಗೌರವ ಸಲಹೆಗಾರ ಪ್ರೇಮ್ ರಾಜ್ ರೋಷನ್, ಕ್ರೀಡಾ ಕಾರ್ಯದರ್ಶಿ ಕಿಶನ್ ಲಾಯಿಲ, ಪ್ರಧಾನ ಕಾರ್ಯದರ್ಶಿ ಗಣೇಶ್, ಸಾಮಾಜಿಕ ಜಾಲತಾಣದ ಸಂಪತ್ ಇದ್ದರು.

ಸುರ್ಯ ಸದಾಶಿವೇಶ್ವರ ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತರು ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿದರು
ಸುರ್ಯ ಸದಾಶಿವೇಶ್ವರ ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತರು ಅಮಾವಾಸ್ಯೆಯ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT