ಸೋಮವಾರ, ಮಾರ್ಚ್ 27, 2023
30 °C

ವಿವಾಹಿತನ ವಿರುದ್ಧ ಅಪಹರಣ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳ್ತಂಗಡಿ: ಒಂಬತ್ತು ತಿಂಗಳುಗಳ ಹಿಂದೆ ವಿವಾಹವಾಗಿದ್ದ ವ್ಯಕ್ತಿಯೊಬ್ಬ, ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು, ಆಕೆಯ ಸಹೋದರಿಯನ್ನು ಕರೆದುಕೊಂಡು ಹೋಗಿದ್ದಾನೆ. ಈ ಸಂಬಂಧ ಮಹಿಳೆಯ ತಂದೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತಾಲ್ಲೂಕಿನ ಕನ್ಯಾಡಿ ಗ್ರಾಮದ ಕೈಕಂಬ ಸಮೀಪದ ನಿವಾಸಿ ಮುಹಮ್ಮದ್ ಅವರ ಪುತ್ರಿಯನ್ನು ಮುಸ್ತಫಾ ಎಂಬ ವ್ಯಕ್ತಿಗೆ ಮದುವೆ ಮಾಡಿಕೊಡಲಾಗಿತ್ತು. ಪತಿ–ಪತ್ನಿಯ ನಡುವೆ ಮನಸ್ತಾಪ ಉಂಟಾಗಿ, ಪತ್ನಿ ತವರು ಮನೆಗೆ ಬಂದು ಉಳಿದಿದ್ದಳು. ಗುರುವಾರ ತಾಯಿಯೊಂದಿಗೆ ಮಾವನ ಮನೆಗೆ ಬಂದ ಮುಸ್ತಫಾ, ನಾದಿನಿಯನ್ನು ಕರೆದುಕೊಂಡು ಹೋಗಿದ್ದು, ಕಿರಿಯ ಪುತ್ರಿ ಮನೆಗೆ ಬಂದಿಲ್ಲವೆಂದು ತಂದೆ ಮುಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು