ಮಂಗಳೂರು: ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಇರಾಕೋಡಿಯಲ್ಲಿ ಈಚೆಗೆ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29) ಬಂಧಿತ ಆರೋಪಿ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಅವರನ್ನು ಇರಾಕೋಡಿಯಲ್ಲಿ ಮೇ 27ರಂದು ಹತ್ಯೆ ಮಾಡಲಾಗಿತ್ತು. ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ಹಲ್ಲೆ ನಡೆಸಲಾಗಿತ್ತು.

ಭರತ್ ಕುಮ್ಡೇಲು ಮನೆ ಶೋಧ: ಈ ಹತ್ಯೆ ಪ್ರಕರಣದ ಆರೋಪಿಯಾಗಿರುವ ಬಂಟ್ವಾಳ ಪುದು ಗ್ರಾಮದ ಭರತ್ ಕುಮ್ಡೇಲು ಎಂಬಾತನ ಮನೆಯನ್ನು ಪೊಲೀಸರು ನ್ಯಾಯಾಲಯದಿಂದ ವಾರಂಟ್ ಪಡೆದು ಶೋಧ ನಡೆಸಿದ್ದಾರೆ. ಈ ಘಟನೆ ನಡೆದಂದಿನಿಂದ ಆರೋಪಿ ಭರತ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭರತ್ ಕುಮ್ಡೇಲು ಬಜರಂಗ ದಳದ ‘ಪುತ್ತೂರು ಜಿಲ್ಲಾ ಘಟಕ’ದ ಸಂಚಾಲಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.